CinemaDistrictsKarnatakaLatestMain PostSandalwood

ಶುಭ ಮಂಗಳದಲ್ಲಿ ಮೇಘನಾ ಗಾಂವ್ಕರ್

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಲ್ ನಿರ್ದೇಶನದ ಶುಭಮಂಗಳ ಸಿನಿಮಾ ಯಾರಿಗೆ ತಾನೆ ಗೊತ್ತಿಲ್ಲ. ಈ ಎವರ್ ಗ್ರೀನ್ ಸಿನಿಮಾವನ್ನು ಯಾರಾದ್ರೂ ಮರೆಯುದುಂಟೇ. .? ಇದೇ ಟೈಟಲ್ ಇಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಹೊಸ ಸಿನಿಮಾ ಸೆಟ್ಟೇರಿರೋದು ಹಳೆ ವಿಷ್ಯ. ಇದೀಗ ಶುಭಮಂಗಳ ಸಿನಿಮಾ ಅಂಗಳದಿಂದ ಸಖತ್ ಮಜವಾಗಿರುವ ಟೀಸರ್ ತುಣುಕು ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಇದನ್ನೂ ಓದಿ : Exclusive- ಅಮೆಜಾನ್ ಪ್ರೈಮ್ನಲ್ಲಿ ‘ಕೆಜಿಎಫ್ 2’ : ಫಸ್ಟ್ ಟೈಮ್ ಮೆಂಬರ್ ಅಲ್ಲದವರೂ ಸಿನಿಮಾ ನೋಡಬಹುದು

ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳ ನಿರ್ಮಾತೃ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಒಂದು ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಕೊಂಡು ಸಿನಿಮಾ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು, ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ಇದನ್ನೂ ಓದಿ : ಕಾಲೇಜು ದಿನಗಳಲ್ಲೇ ರಮ್ಯಾ ಮೇಲೆ ಕ್ರಶ್ ಆಗಿದೆ : ರಕ್ಷಿತ್ ಶೆಟ್ಟಿ

ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ವೆರೈಟಿ ಹಾಡುಗಳಿದ್ದು, ಜೂಡಾ ಸ್ಯಾಂಡಿ ಮ್ಯೂಸಿಕ್ ಇಂಪು, ರಾಕೇಶ್ ಬಿ ರಾಜ್ ಕ್ಯಾಮೆರಾ ತಂಪು ಸಿನಿಮಾಕ್ಕಿದೆ. ಶುಭಮಂಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ದೇಶಕ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್ ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ಕೂಡ ನಿರ್ಮಾಣ ಮಾಡಿದ್ದಾರೆ.

Leave a Reply

Your email address will not be published.

Back to top button