ನವದೆಹಲಿ: ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ಗೆ ಎಲ್ಲೆಡೆಯಿಂದ ಗೌರವಯುತ ಬೀಳ್ಕೊಡುಗೆ ಸಿಗುತ್ತಿದೆ. ಆದರೆ ಈ ವಿಚಾರದಲ್ಲಿಯೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಕೋವಿಂದ್‍ರನ್ನು ಅಪಮಾನಿಸುವ ರೀತಿ ಟ್ವೀಟ್ ಮಾಡಿದ್ದಾರೆ.
The outgoing President leaves behind a legacy where the Indian Constitution was trampled upon umpteenth times. Be it scrapping of Article 370,CAA or the unabashed targeting of minorities & Dalits, he fulfilled BJPs political agenda all at the cost of the Indian Constitution.
— Mehbooba Mufti (@MehboobaMufti) July 25, 2022
Advertisement
ನಿರ್ಗಮಿತ ರಾಷ್ಟ್ರಪತಿಗಳು, ದೇಶದ ಸಂವಿಧಾನಕ್ಕೆ ಅನೇಕ ಬಾರಿ ವಿರುದ್ಧವಾಗಿ ನಡೆದುಕೊಳ್ಳುವ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಬರೆದುಕೊಂಡಿದ್ದಾರೆ. ತಮ್ಮ ವಾದವನ್ನು ಸಮರ್ಥನೆ ಮಾಡಿಕೊಳ್ಳಲು ಆರ್ಟಿಕಲ್ 370 ರದ್ದು, ಸಿಎಎ, ಅಲ್ಪಸಂಖ್ಯಾತರು ಮತ್ತು ದಲಿತರನ್ನು ನಿರ್ಲಜ್ಜವಾಗಿ ಗುರಿಯಾಗಿಸಿ ದಾಳಿ ನಡೆಸಲಾಗುತ್ತಿದೆ. ಬಿಜೆಪಿಯ ಅಜೆಂಡಾಗಳನ್ನು ಈಡೇರಿಸಲು ಕೋವಿಂದ್ ಅವರು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಜುಲೈ 25ರಂದೇ ರಾಷ್ಟ್ರಪತಿ ಅಧಿಕಾರ ಸ್ವೀಕಾರ ಯಾಕೆ?
Advertisement
As for the protocol, how did Chief Minister Shinde appear in the first row? They make their own people sit in the front. And a recognised opposition leader is simply brushed aside. It is not okay: Mallikarjun Kharge, LoP in Rajya Sabha pic.twitter.com/irelColVMa
— ANI (@ANI) July 25, 2022
Advertisement
ಇತ್ತ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪದಗ್ರಹಣ ಕಾರ್ಯಕ್ರಮಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಅವರ ಸ್ಥಾನಮಾನಕ್ಕೆ ಅನುಗುಣವಾಗಿ ಆಸನ ವ್ಯವಸ್ಥೆ ಮಾಡದೇ ಅಪಮಾನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರೊಟೋಕಾಲ್ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ರಾಜ್ಯಸಭೆ ಚೇರ್ಮನ್‍ಗೆ ಪತ್ರ ಬರೆದಿದೆ. ಈ ಕಾರ್ಯಕ್ರಮಕ್ಕೆ ಬಿಹಾರ ಸಿಎಂ ನಿತೀಶ್ ಗೈರಾಗಿರುವುದು ಸಹ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಬಿಜೆಪಿಯಿಂದ ಆಹ್ವಾನ ಇದ್ದರೂ, ಕಳೆದ ಒಂದು ವಾರದಲ್ಲಿ ನಿತೀಶ್ ಕುಮಾರ್ ಗೈರಾಗುತ್ತಿರುವ ಮೂರನೇ ಕಾರ್ಯಕ್ರಮ ಇದು. ಎನ್‍ಡಿಎಯಿಂದ ನಿತೀಶ್ ದೂರ ಸರಿಯುತ್ತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.