ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾಲ ಹಗರಣದಲ್ಲಿ (PNB Scam) ಪ್ರಮುಖ ಆರೋಪಿಯಾದ ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ (Mehul Choksi) ಬೆಲ್ಜಿಯಂನ್ ಆಂಟ್ವೆರ್ಪ್‌ನಲ್ಲಿ ಪತ್ನಿ ಪ್ರೀತಿ ಚೋಕ್ಸಿಯೊಂದಿಗೆ ವಾಸಿಸುತ್ತಿದ್ದಾರೆ. ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಭಾರತೀಯ ಅಧಿಕಾರಿಗಳು ಬೆಲ್ಜಿಯಂ ಅಧಿಕಾರಿಗಳನ್ನ ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (PNB) 13,850 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಕೇಂದ್ರೀಯ ತನಿಖಾ ಸಂಸ್ಥೆ (CBI) ಮತ್ತು ಜಾರಿ ನಿರ್ದೇಶನಾಲಯ (ED)ಕ್ಕೆ ಪ್ರಮುಖವಾಗಿ ಬೇಕಾಗಿರುವ ಚೋಕ್ಸಿ ಸದ್ಯ ಕೆರಿಬಿಯನ್ ದ್ವೀಪ ರಾಷ್ಟ್ರವಾದ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮರಗಳ ಮಾರಣ ಹೋಮ – 100 ವರ್ಷಗಳ ಹಳೆಯ ಮರಗಳಿಗೆ ಕೊಡಲಿ ಏಟು!
ವೈದ್ಯಕೀಯ ಚಿಕಿಯತ್ಸೆಗಾಗಿ ತೆರಳಿದ್ದ ಚೋಕ್ಸಿ ದ್ವೀಪರಾಷ್ಟ್ರದ ಪ್ರಜೆಯಾಗಿ ಉಳಿದಿದ್ದಾರೆ ಎಂದು ಅಲ್ಲಿನ ಸಚಿವ ಇಪಿ ಚೆಟ್ ಗ್ರೀನ್ ಇತ್ತೀಚೆಗೆ ತಿಳಿಸಿದ್ದಾರೆ ಎಂದು ಸುದ್ದಿಷಂಸ್ಥೆಯೊಂದು ವರದಿ ಮಾಡಿದೆ.
65 ವರ್ಷದ ಚೋಕ್ಸಿ 2023ರ ನವೆಂಬರ್ 15ರಿಂದ ʻಎಫ್- ರೆಸಿಡೆನ್ಸಿʼ ಪೌರತ್ವ ಕಾರ್ಡ್ ಪಡೆದು ಬೆಲ್ಜಿಯಂನಲ್ಲಿ ಕಾನೂನುಬದ್ಧವಾಗಿ ವಾಸಿಸುತ್ತಿದ್ದಾರೆ. ಅವರ ಪತ್ನಿ ಬೆಲ್ಜಿಯಂ ನವರೇ ಆದ್ದರಿಂದ ಪೌರತ್ವ ಕಾರ್ಡ್ ಪಡೆಯಲು ಚೋಕ್ಸಿಗೆ ಸಹಕಾರ ನೀಡಿದ್ದಾರೆ. ಈ ನಡುವೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳೋದಕ್ಕೆ ಚೋಕ್ಸಿ ನಕಲಿ ದಾಖಲೆಗಳನ್ನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ
ಸದ್ಯ ಚೋಕ್ಸಿ ಭಾರತದ ಪೌರತ್ವವನ್ನೂ ತ್ಯಜಿಸಿಲ್ಲ. ಒಂದು ವೇಳೆ ತಾತ್ಕಾಲಿಕವಾಗಿ ಪಡೆದಿರುವ ಬೆಲ್ಜಿಯಂ ಪೌರತ್ವವನ್ನು ಶಾಶ್ವತವಾಗಿ ಪರಿವರ್ತಿಸಿದ್ರೆ, ಮುಂದೆ ಆತ ಯುರೋಪಿಯನ್ ರಾಷ್ಟ್ರಗಳಲ್ಲಿ ಸ್ವತಂತ್ರವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಳಿಕ ಆತನನ್ನು ಕರೆತರಲು ಭಾರತಕ್ಕೆ ಕಷ್ಟವಾಗಬಹುದು ಎನ್ನಲಾಗಿದೆ. ಈ ನಡುವೆ ಚೋಕ್ಸಿ ಕ್ಯಾನ್ಸರ್ ಚಿಕಿತ್ಸೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳುವ ಪ್ಲ್ಯಾನ್‌ನಲ್ಲಿದ್ದಾರೆ ಎಂದು ಕೆಲ ವರದಿಗಳು ತಿಳಿಸಿವೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿಯಾದ ಚೋಕ್ಸಿ 2018ರಲ್ಲಿ ಭಾರತದಿಂದ ಫಲಾಯನ ಮಾಡಿದರು. ಇದನ್ನೂ ಓದಿ: Photo Gallery | IPL ಉದ್ಘಾಟನಾ ವೇದಿಕೆಯಲ್ಲಿ ಬೆಡಗು ಬಿನ್ನಾಣ; ಬಳ್ಳಿಯಂತೆ ಬಳುಕಿದ ದಿಶಾ!