ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಮೈತ್ರಿಕೂಟ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನ ಕೈಗೊಂಡಿದೆ.
ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಂಬಂಧವಾಗಿ ಗುರುವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಯುಪಿಎ ಮಿತ್ರಪಕ್ಷಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ಮೀರಾ ಕುಮಾರ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ತೀರ್ಮಾನಿಸಲಾಯಿತು.
Advertisement
ಸಿಪಿಎಂ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸೂಕ್ತ ಅಭ್ಯರ್ಥಿ ಎಂದು ಹೇಳಿತ್ತು. ಆದರೆ ರಾಮನಾಥ್ ಕೋವಿಂದ್ ದಲಿತ ಅಭ್ಯರ್ಥಿ ಆಗಿರುವ ಕಾರಣ ಅವರ ಮುಂದೆ ಸ್ಪರ್ಧಿಸಲು ಕಾಂಗ್ರೆಸ್ ಈಗ ದಲಿತರಾಗಿರುವ ಮೀರಾ ಕುಮಾರ್ ಅವರನ್ನು ಇಳಿಸಿದೆ.
Advertisement
ರಾಮನಾಥ್ ಕೋವಿಂದ್ ದಲಿತರಾಗಿದ್ದರೂ ಆರ್‍ಎಸ್‍ಎಎಸ್ ಹಿನ್ನೆಲೆಯವರಾಗಿದ್ದಾರೆ. ಹೀಗಾಗಿ ಎನ್‍ಡಿಎ ಆಯ್ಕೆಯನ್ನು ನಾವು ಒಪ್ಪಲು ಸಿದ್ದರಿಲ್ಲ ಎಂದು ಎಡಪಕ್ಷಗಳು ತಿಳಿಸಿತ್ತು.