ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರಗಳಿಗೆ ತಮಿಳುನಾಡು ಮತ್ತೆ ಅಡ್ಡಗಾಲು ಹಾಕುವ ಪ್ರಯತ್ನ ಆರಂಭಿಸಿದೆ.
ಸುಪ್ರೀಂ ಕೋರ್ಟ್‍ಗೆ ಹೊಸ ಅರ್ಜಿಯೊಂದನ್ನು ಸಲ್ಲಿಸಿರುವ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮೇಕೆದಾಟು ಯೋಜನೆಯ ಬಗ್ಗೆ ಚರ್ಚಿಸದಂತೆ ತಡೆಯಾಜ್ಞೆ ನೀಡಲು ಮನವಿ ಮಾಡಿದೆ. ಇದನ್ನೂ ಓದಿ: RSS ಚಡ್ಡಿ ಬಗ್ಗೆ ಸಿದ್ದರಾಮಯ್ಯ ಭಯಭೀತರಾಗಿದ್ದಾರೆ: ಕೋಟ ಶ್ರೀನಿವಾಸ ಪೂಜಾರಿ
Advertisement
Advertisement
ಇಂದು ಈ ಬಗ್ಗೆ ಅರ್ಜಿ ಸಲ್ಲಿಸಿರುವ ತಮಿಳುನಾಡು ಸರ್ಕಾರ, ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಲಿಖಿತ ಮನವಿ ಮಾಡಿದೆ. ಪ್ರಾಧಿಕಾರದ ಅಧಿಕಾರಿಗಳು ಮುಂದಿನ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುವ ಭರವಸೆ ನೀಡಿದೆ.
Advertisement
ಸುಪ್ರೀಂ ಕೋರ್ಟ್‍ನಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಮೂಲ ಅರ್ಜಿಯ ವಿಚಾರಣೆ ಬಾಕಿ ಇರುವ ಹೊತ್ತಲ್ಲಿ ಪ್ರಾಧಿಕಾರಕ್ಕೆ ಈ ಬಗ್ಗೆ ಚರ್ಚಿಸುವ ಯಾವುದೇ ಅಧಿಕಾರವಿಲ್ಲ. ಕೇಂದ್ರ ಸರ್ಕಾರವೇ ಡಿಪಿಆರ್ ಸಲ್ಲಿಸಲು ಅನುಮತಿ ನೀಡಿದ್ದು, ಆದರೆ ಪರಿಸರ ಇಲಾಖೆ ಅನುಮತಿಗೆ ನೆರೆ ರಾಜ್ಯಗಳ ಅನುಮತಿ ಅಗತ್ಯ ಎಂದು ಹೇಳಿದೆ. ಹೀಗಾಗಿ ಪ್ರಾಧಿಕಾರದ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವುದು ಸೂಕ್ತವಲ್ಲ. ಇದನ್ನೂ ಓದಿ: KRDIL ಅಧಿಕಾರಿಗಳಿಂದ ಕಟ್ಟಡ ನಿರ್ಮಾಣ: ಮೈಮೇಲೆ ಗೇಟ್ ಬಿದ್ದು ಬಾಲಕ ಸಾವು
Advertisement
ಈ ಹಿನ್ನೆಲೆ ಮುಂದಿನ ಸಭೆಯಲ್ಲಿ ಪ್ರಾಧಿಕಾರದ ಅಧಿಕಾರಿಗಳು ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಚರ್ಚೆ ಮಾಡದಂತೆ ಹಾಗೂ ಯಾವುದೇ ಆದೇಶಗಳನ್ನು ಮಾಡದಂತೆ ಕೋರ್ಟ್ ತಡೆಯಾಜ್ಞೆ ನೀಡಬೇಕು ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ಮನವಿ ಮಾಡಿದೆ.