ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ಉಪನಾಯಕ ಸಿದ್ದರಾಮಯ್ಯ ಸೇರಿ 30 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋವಿಡ್ ಸೋಂಕು ನಿಯಂತ್ರಣದ ಉದ್ದೇಶದಿಂದ ಸರ್ಕಾರ ರಾಜ್ಯದಲ್ಲಿ ಎಲ್ಲ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿದೆ. ಹೀಗಿದ್ದರೂ ವೀಕೆಂಡ್ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್‌ಡಿಎಂಎ) ಕಾಯ್ದೆಯ ಅಡಿಯಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದ ಆರೋಗ್ಯ ಅಧಿಕಾರಿ ವಿರುದ್ಧ ಡಿಕೆಶಿ ಗರಂ
ಕಾವೇರಿ ನದಿ ದಡದಲ್ಲಿ ನಮ್ಮ ಪಾದಯಾತ್ರೆ ಆರಂಭವಾಗಿದೆ. ಮೇಕೆದಾಟು ಕರ್ನಾಟಕದ ಜಲಾಶಯಗಳ ಪಟ್ಟಿಯಲ್ಲಿ ಸೇರಲು ತಾಯಿ ಕಾವೇರಿ ಹರಸುತ್ತಾಳೆ ಎನ್ನುವ ಭರವಸೆ ಹೆಚ್ಚಾಗಿದೆ. ನಮ್ಮ ಹಕ್ಕಿಗಾಗಿ ಹೋರಾಡಲು ಕನ್ನಡ ನಾಡಿನ ಅಣ್ಣ ತಮ್ಮಂದಿರು, ಅಕ್ಕತಂಗಿಯರು ನೆರವಾಗುತ್ತಾರೆ ಎನ್ನುವ ನಂಬಿಕೆ ನನಗಿದೆ. #NammaNeeruNammaHakku pic.twitter.com/INkMQVXc0k
— DK Shivakumar (@DKShivakumar) January 9, 2022
ವೀಕೆಂಡ್ ಕರ್ಫ್ಯೂ ವೇಳೆ ಪಾದಯಾತ್ರೆ ಕೈಗೊಂಡಿದ್ದಕ್ಕೆ ಜನರಿಂದ ವ್ಯಾಪಕ ಟೀಕೆ ಕೇಳಿ ಬಂದಿತ್ತು. ಸಾಮಾನ್ಯ ಜನರು ರಸ್ತೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆದರೆ ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಿ ಪಾದಯಾತ್ರೆ ಮಾಡಿದವರ ಮೇಲೆ ಕ್ರಮ ಯಾಕಿಲ್ಲ ಎಂದು ಜನರು ಪ್ರಶ್ನಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಮೇಕೆದಾಟು ನಡಿಗೆ ನೀರಿಗಾಗಿ, ಎರಡೂವರೆ ಕೋಟಿ ಜನರ ಬದುಕಿಗಾಗಿ: ಡಿಕೆಶಿ