ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕರ್ನಾಟಕದ ಪರ ಬ್ಯಾಟ್ ಬಿಸಿದೆ.
ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಜಲ ಆಯೋಗವು ಕರ್ನಾಟಕ ಸರಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
Advertisement
ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವ ಮೇಘವಾಲ್, ಕುಡಿಯುವ ಹಾಗೂ ವಿದ್ಯುತ್ ಉತ್ಪಾದನೆ ಉದ್ದೇಶದ ಮೇಕೆದಾಟು ಅಣೆಕಟ್ಟೆ ಯೋಜನೆ ಸಂಬಂಧ ಕರ್ನಾಟಕ ಸರಕಾರವು ಸಾಧ್ಯತಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿ ಸಮಗ್ರ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ಅವಕಾಶ ನೀಡುವಂತೆಯೂ ಮನವಿ ಮಾಡಿಕೊಂಡಿತ್ತು. ಕೇಂದ್ರ ಜಲ ಆಯೋಗದ ಪರಿಶೀಲನಾ ಸಮಿತಿಯು ಕರ್ನಾಟಕಕ್ಕೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.
Advertisement
Advertisement
ಈ ಬೆಳವಣಿಗೆ ನಡುವೆ ಎಂದಿನಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೇಕೆದಾಟು ಆಣೆಕಟ್ಟು ವಿಚಾರ ಪ್ರತಿಧ್ವನಿಸಿತು. ಕಲಾಪ ಆರಂಭದಿಂದಲೂ ತಮಿಳುನಾಡಿದ ಸಂಸದರು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
Advertisement
ಲೋಕಸಭೆ ಮಾತನಾಡಿದ್ದ ತಮಿಳುನಾಡು ಸಂಸದ ಪಿ ವೇಣುಗೋಪಾಲ್ ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ನಿರ್ಮಿಸಲಾಗುತಿದೆ. ಮೇಕೆದಾಟು ಆಣೆಕಟ್ಟು ಕೇವಲ ಕುಡಿಯುವ ನೀರಿನ ದೃಷ್ಟಿಯಿಂದ ಮಾತ್ರವಲ್ಲ ಇದನ್ನು ನೀರಾವರಿಗೂ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ತಮಿಳುನಾಡು ರೈತರ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಿದರು. ತಮಿಳುನಾಡಿನ ಆರೋಪಕ್ಕೆ ಪ್ರತ್ಯತ್ತರ ನೀಡಿದ ಸಂಸದ ಪ್ರಹ್ಲಾದ್ ಜೋಶಿ ಎಲ್ಲ ಆರೋಪಗಳನ್ನು ನಿರಾಕರಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv