ನವದೆಹಲಿ: ಮೇಕೆದಾಟು ಆಣೆಕಟ್ಟು ಸಮಗ್ರ ಯೋಜನಾ ವರದಿ (ಡಿಪಿಆರ್) ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜು. 26ಕ್ಕೆ ಮುಂದೂಡಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ, ಜು. 26ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿತು. ಅಲ್ಲದೇ ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿತು.
Advertisement
Advertisement
ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಬಾಕಿ ಉಳಿದ ಹಿನ್ನೆಲೆಯಲ್ಲಿ ಜು. 22ರಂದು ನಿಗದಿಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚಿಸಲ್ಲ, ಚರ್ಚೆ ಮುಂದೂಡಲು ಮನವಿ ಮಾಡುತ್ತೇವೆ ಎಂದು ಕರ್ನಾಟಕ, ತಮಿಳುನಾಡು ಸರ್ಕಾರ ಪರ ವಕೀಲರು ಕೋರ್ಟ್‍ಗೆ ತಿಳಿಸಿದರು. ಇದಕ್ಕೆ ಕೋರ್ಟ್ ಸಮ್ಮತಿ ಸೂಚಿಸಿತು.
Advertisement
ಮೇಕೆದಾಟು ನದಿಗೆ ಆಣೆಕಟ್ಟು ಕಟ್ಟಲು ಹೊರಟಿರುವ ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್ ಸಲ್ಲಿಸಿದ್ದು, ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲು ಸಮಿತಿಗೆ ಮನವಿ ಮಾಡಿತ್ತು. ಈ ಬಗ್ಗೆ ಚರ್ಚೆಗೆ ಸಮಿತಿಯೂ ಕೂಡಾ ಒಪ್ಪಿಗೆ ಸೂಚಿಸಿತ್ತು. ಇದನ್ನೂ ಓದಿ: ಮೊದಲು ಎಲೆಕ್ಷನ್ ಆಗಲಿ, ಆ ಮೇಲೆ ಪೈಪೋಟಿ ಮಾಡಲಿ: ಲಕ್ಷ್ಮಿ ಹೆಬ್ಬಾಳ್ಕರ್
Advertisement
ಆದರೆ ಇದಕ್ಕೆ ವಿರೋಧಿಸಿದ ತಮಿಳುನಾಡು ಸರ್ಕಾರ, ಮೇಕೆದಾಟು ಆಣೆಕಟ್ಟು ಯೋಜನೆ ವಿರುದ್ಧ ಮೂಲ ಅರ್ಜಿ ಸುಪ್ರೀಂಕೋರ್ಟ್‍ನಲ್ಲಿ ಬಾಕಿ ಇದೆ. ಈ ಹಂತದಲ್ಲಿ ಸಭೆಯಲ್ಲಿ ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು, ಈ ಬಗ್ಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಇದನ್ನೂ ಓದಿ: ಹಿಜಬ್ ವಿವಾದದ ಬೆನ್ನಲ್ಲೇ ಮುಸ್ಲಿಮರಿಂದ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ