ಮಂಡ್ಯ: ಮೇಲುಕೋಟೆಯ (Melkote) ಚೆಲುವನಾರಾಯಣಸ್ವಾಮಿ ದೇವಾಲಯದ (Cheluvanarayana Swamy Temple) ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ (82) ನಿಧನರಾಗಿದ್ದಾರೆ. ಈ ಹಿನ್ನೆಲೆ ಇಂದು ಮಧ್ಯಾಹ್ನ 12 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.
ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿ ಬಳಿಕ ದೇವಾಲಯದಲ್ಲಿ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ (Karagam Narayana Iyengar) ರಾಜ್ಯಪ್ರಶಸ್ತಿಗೂ ಭಾಜನರಾಗಿದ್ದರು. ನಿವೃತ್ತಿ ಬಳಿಕ ಚೆಲುವನಾರಾಯಣನ ಸೇವೆಗಾಗಿಯೇ ಇಡೀ ಜೀವನ ಮುಡಿಪಾಗಿಟ್ಟು, ಶಿಕ್ಷಣ ಕ್ಷೇತ್ರದಲ್ಲೂ ದೀರ್ಘ ಅನುಪಮ ಸೇವೆ ಸಲ್ಲಿಸಿದ್ದರು. ಇಂದು ವಯೋಸಹಜ ಕಾಯಿಲೆಯಿಂದ ಮೇಲುಕೋಟೆಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ತನಿಖಾಧಿಕಾರಿ ತಂಡಕ್ಕೆ ಮತ್ತೆ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ
ಇಂದು ಬೆಳಗ್ಗೆ 11:30ಕ್ಕೆ ದೇವಾಲಯದ ಸಾಂಪ್ರದಾಯಿಕ ಮರ್ಯಾದೆಯೊಡನೆ ಮೇಲುಕೋಟೆಯಲ್ಲಿ ಕರಗಂ ನಾರಾಯಣ ಅಯ್ಯಂಗಾರ್ ಅಂತ್ಯಕ್ರಿಯೆ ನಡೆಯಲಿದೆ. ಹೀಗಾಗಿ ಇಂದು ಮಧ್ಯಾಹ್ನ 12 ಗಂಟೆಯವರೆಗೆ ದೇವಸ್ಥಾನದ ಬಾಗಿಲು ಮುಚ್ಚಿದ್ದು, ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಮೈಸೂರಿನಲ್ಲಿ `ದಾಸ’ ತಂಗಿದ್ದ ಹೊಟೇಲ್, ಇತರೆಡೆ ಮಹಜರ್- ಡಿಫೆಂಡರ್ ಕಾರಿಗೆ ಬರುತ್ತಾ ಕಂಟಕ?