– ವಜ್ರದ ಕಿರೀಟ ತೊಟ್ಟು ಕಂಗೊಳಿಸಿದ ಚೆಲುವನಾರಾಯಣಸ್ವಾಮಿ
ಮಂಡ್ಯ: ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ (Melukote) ವೈರಮುಡಿ ಬ್ರಹ್ಮೋತ್ಸವ (Vairamudi Brahmotsava) ವಿಜೃಂಭಣೆಯಿಂದ ನೆರವೇರಿತು. ರಾಜ್ಯವಲ್ಲದೆ ನೆರೆ ರಾಜ್ಯಗಳಿಂದಲೂ ಬಂದಿದ್ದ ಲಕ್ಷಾಂತರ ಭಕ್ತರು ವಜ್ರ ಖಚಿತ ವೈರಮುಡಿ ಕಿರೀಟ ಹಾಗೂ ಆಭರಣ ತೊಟ್ಟು ಕಂಗೊಳಿಸುತ್ತಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡು ಪುನೀತರಾದರು.
ದಕ್ಷಿಣ ಬದರಿ ಕ್ಷೇತ್ರ ಎಂದೇ ಪ್ರಸಿದ್ದಿ ಪಡೆದಿರುವ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವದ ಸಂಭ್ರಮ ಮನೆ ಮಾಡಿತ್ತು. ವಜ್ರ ಖಚಿತ ವೈರಮುಡಿ ಕಿರೀಟ ಹಾಗೂ ಆಭರಣಗಳನ್ನ ಧರಿಸಿ ಶ್ರೀದೇವಿ, ಭೂದೇವಿ ಜೊತೆ ಗರುಢಾರೂಡನಾದ ಚೆಲುವನಾರಾಯಣಸ್ವಾಮಿ ಮೇಲುಕೋಟೆಯ ರಾಜಬೀದಿಯಲ್ಲಿ ಸಾಗುತ್ತಿದ್ದರೆ ಭಕ್ತರು ಭಗವಂತನನ್ನು ಕಣ್ತುಂಬಿಕೊಂಡರು. ಇದನ್ನೂ ಓದಿ: ಆರ್‌ಸಿಬಿ ಗೆದ್ದ ಮೂರು ಗೆಲುವು ಸಾಮಾನ್ಯ ಗೆಲುವಲ್ಲ!
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ ಪೂಜೆ ಸಲ್ಲಿಸುವ ಮೂಲಕ ವೈರಮುಡಿ ಕಿರೀಟವನ್ನು ಬರಮಾಡಿಕೊಂಡರು. ಬಳಿಕ ಚೆಲುವನಾರಾಯಣಸ್ವಾಮಿ ಸನ್ನಿಧಿಯ ನವರಂಗದಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ವಜ್ರಾಭರಣಗಳನ್ನು ಪರಿಶೀಲನೆ ಮಾಡಲಾಯಿತು. ನಂತರ ಚೆಲುವನಾರಾಯಣಸ್ವಾಮಿ ಉತ್ಸವ ಮೂರ್ತಿಗೆ ವಜ್ರಖಚಿತ ವೈರಮುಡಿ ಕಿರೀಟವನ್ನು ಧಾರಣೆ ಮಾಡಲಾಯಿತು. ಇದನ್ನೂ ಓದಿ: ಬೇಸಿಗೆಯಲ್ಲಿ ದೇಹವನ್ನು ತಂಪಾಗಿರಿಸಬೇಕೆ? – ಒಂದು ಕ್ಲಿಕ್‌ನಲ್ಲಿದೆ ಸಿಂಪಲ್ ಟಿಪ್ಸ್
ಸೋಮವಾರ ರಾತ್ರಿ 8 ಗಂಟೆ 10 ನಿಮಿಷಕ್ಕೆ ಮಹಾ ಮಂಗಳಾರತಿ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ದೇಗುಲದಿಂದ ಹೊರಬರುತ್ತಿದ್ದಂತೆ ಭಕ್ತರ ಹರ್ಘೋದ್ಘಾರ ಮುಗಿಲುಮುಟ್ಟುವಂತಿತ್ತು. ಸರ್ವಾಲಂಕಾರದೊಂದಿಗೆ ಕಂಗೊಳಿಸುತ್ತಿದ್ದ ಚೆಲುವನಾರಾಯಣಸ್ವಾಮಿ ಉತ್ಸವ ಮೇಲುಕೋಟೆಯ ರಾಜಬೀದಿಗಳಲ್ಲಿ ತೆರಳಿತು. ಈ ವೇಳೆ ರಸ್ತೆಯ ಎರಡೂ ಬದಿಗಳಲ್ಲಿ ನಿಂತ ಭಕ್ತರು ಸ್ವಾಮಿಯ ದರ್ಶನ ಪಡೆದು ಪುನೀತರಾದರು. ಇದನ್ನೂ ಓದಿ: ಮುಡಾ ಹಗರಣ – ಇಂದು ಸಿಎಂ ಸಿದ್ದರಾಮಯ್ಯಗೆ ನಿರ್ಣಾಯಕ ದಿನ