Connect with us

Cricket

ಕೊಹ್ಲಿ ಭವಿಷ್ಯ ನುಡಿದಿದ್ದ ಪ್ಯಾಟ್ ಕಾಲೆಳೆದ ಅಭಿಮಾನಿಗಳು

Published

on

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಸಿಡಿಸಲ್ಲ ಎಂದು ಭವಿಷ್ಯ ನುಡಿದ್ದ ಆಸೀಸ್ ಬೌಲರ್ ಪ್ಯಾಟ್ ಕಮ್ಮಿನ್ಸ್ ರನ್ನು ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಕಾಲೆಳೆದಿದ್ದಾರೆ.

ಆಸೀಸ್ ಸರಣಿ ಆರಂಭಕ್ಕೂ ಮುನ್ನ ಜುಲೈನಲ್ಲಿ ಕೊಹ್ಲಿ ಬಗ್ಗೆ ಹೇಳಿಕೆ ನೀಡಿದ್ದ ಪ್ಯಾಟ್ ಕಮ್ಮಿನ್ಸ್, ಆಸ್ಟ್ರೇಲಿಯಾ ವಿರುದ್ಧ ಕೊಹ್ಲಿ ಶತಕ ಗಳಿಸಲು ಸಾಧ್ಯವಿಲ್ಲ ಎಂದಿದ್ದರು. ಅಲ್ಲದೇ 2014 ಟೂರ್ನಿಯಲ್ಲಿ ಆಸೀಸ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೋಲುಂಡಿತ್ತು. ಈ ಸಂದರ್ಭದಲ್ಲಿ ಕೊಹ್ಲಿ ಬೆಸ್ಟ್ ಬ್ಯಾಟ್ಸ್ ಮನ್ ಆಗಿ ಸರಣಿಯಲ್ಲಿ ಕೊಹ್ಲಿ 4 ಶತಕ ಸಿಡಿಸಿದ್ದರು. ಆದರೆ ಈ ಬಾರಿ ಕೊಹ್ಲಿ ಶತಕ ಸಿಡಿಸಲು ಸಾಧ್ಯವಿಲ್ಲ ಎಂದಿದ್ದರು.

ಇದೀಗ ಪ್ಯಾಟ್ ಹೇಳಿಕೆಯನ್ನು ವರದಿ ಮಾಡಿದ್ದ ಮಾಧ್ಯಮಗಳ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಭಿಮಾನಿಗಳು, ಕೆಲ ಕಾಲ ಮೌನ ಆಚರಿಸಿ ಎಂದು ಹೇಳುವ ಮೂಲಕ ಕಾಲೆಳೆದಿದ್ದಾರೆ. ಅಂದಹಾಗೇ ಆಸೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ವೇಳೆ ಕೊಹ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಈ ಮೂಲಕ ಪ್ಯಾಟ್ ನುಡಿದಿದ್ದ ಭವಿಷ್ಯವನ್ನು ಸುಳ್ಳು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿ ಶತಕದ ಆಟಕ್ಕೆ ಅಭಿಮಾನಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆದರೆ 123 ರನ್ ಗಳಿಸಿದ್ದ ಕೊಹ್ಲಿ ವಿಕೆಟ್ ಪಡೆದ ಪ್ಯಾಟ್ ಯಾವುದೇ ರೀತಿ ಸಂಭ್ರಮಾಚರಣೆ ಮಾಡಿರಲಿಲ್ಲ. ಇದನ್ನೇ ಗುರಿ ಮಾಡಿದ ಟ್ವಿಟ್ಟಿಗರು ಹಲವು ರೀತಿಯ ಮಿಮ್ಸ್ ಸೃಷ್ಟಿ ಮಾಡಿ ಕಾಲೆಳೆದಿದ್ದಾರೆ.

https://twitter.com/ViratSelva181/status/1074267635305480192

ಉಳಿದಂತೆ 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದ ಅಂತ್ಯಕ್ಕೆ ಆಸೀಸ್, 4 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದ್ದು, 175 ರನ್ ಮುನ್ನಡೆ ಪಡೆದುಕೊಂಡಿದೆ.

ಸಂಕ್ಷೀಪ್ತ ಸ್ಕೋರ್:
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ – 326 ರನ್
ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ – 283 ರನ್
ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್ – 134 ರನ್/ 4 ವಿಕೆಟ್*

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Click to comment

Leave a Reply

Your email address will not be published. Required fields are marked *