ಬೆಂಗಳೂರು: ಜೈ ಶ್ರೀರಾಮ್ (Jai Shri Ram) ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್ ಅಂದಿದ್ದಕ್ಕೆ ಕಿರಿಕ್- ಅಲ್ಲಾಹು ಮಾತ್ರ ಕೂಗಬೇಕು ಅಂತೇಳಿ ಅಟ್ಯಾಕ್
- Advertisement
ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
- Advertisement
A1 ಆರೋಪಿ ಫರ್ಮಾನ್, A2 ಸಮೀರ್ ಹಾಗೂ ಇಬ್ಬರು ಅಪ್ರಾಪ್ತರ ಬಂಧನವಾಗಿದೆ. ತಡರಾತ್ರಿವರೆಗೂ ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿಯೇ ಪೊಲೀಸರು ಆರೋಪಿಗಳ ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ಇದನ್ನೂ ಓದಿ: ಪ್ರೆಸಿಡೆಂಟ್ ಸಿದ್ದರಾಮಯ್ಯ, ಸಿಎಂ ಡಿಕೆ ಶಿವಕುಮಾರ್- ಚರ್ಚೆಗೆ ಗ್ರಾಸವಾಯ್ತು ರಾಗಾ ಭಾಷಣ