ಲಕ್ನೋ: ಗಂಗಾ ನದಿಯ ಮಧ್ಯದಲ್ಲಿ ದೋಣಿ ಮೂಲಕ ಪ್ರಯಾಣಿಸುತ್ತಿದ್ದ ಕೆಲ ಯವಕರು ಹುಕ್ಕಾ ಪೈಪ್ ಉಪಯೋಗಿಸಿ ಧೂಮಪಾನ ಹಾಗೂ ಚಿಕನ್ ಮಾಡುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಘಟನೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ದಾರಗಂಜ್‌ನಲ್ಲಿರುವ ನಾಗವಾಸುಕಿ ಮಂದಿರದ ಸಮೀಪ ನಡೆದಿದೆ. ಹಿಂದೂಗಳ ಪ್ರಮುಖ ಯಾತ್ರಾ ಕೇಂದ್ರದಲ್ಲಿ ಈ ರೀತಿಯ ಘಟನೆ ಸಂಭವಿಸಿರುವುದಕ್ಕೆ ನೆಟ್ಟಿಗರು ಕಿಡಿಕಾರಿದ್ದಾರೆ.
Advertisement
Advertisement
ಘಟನೆಗೆ ಸಂಬಂಧಿಸಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಬೋಟ್‌ನಲ್ಲಿ ಮೋಜು ಮಸ್ತಿ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಲಿನ ಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಅಂಡರ್ ಪಾಸ್‍ನಲ್ಲಿ ಸಿಲುಕಿದ ಕಾಲೇಜ್ ಬಸ್- ವಿದ್ಯಾರ್ಥಿಗಳ ರಕ್ಷಣೆ
Advertisement
Advertisement
ಕಳೆದ ವಾರ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾದಾಗ ಪ್ರಯಾಗರಾಜ್‌ನ ಹಲವಾರು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದವು. ರಾಜಾಪುರ, ಬಘರಾ, ದಾರಗಂಜ್ ಮತ್ತು ಇತರ ಹಲವಾರು ಸ್ಥಳಗಳಲ್ಲಿ ತಗ್ಗು ಪ್ರದೇಶದ ಕಾಲೋನಿಗಳಲ್ಲಿ ನೀರು ಸಂಗ್ರಹವಾಗಿದೆ. ನಗರದಲ್ಲಿ ಪ್ರವಾಹದಂತಹ ಪರಿಸ್ಥಿತಿಯ ನಡುವೆ ಆಡಳಿತವು ದೋಣಿ ವಿಹಾರಕ್ಕೆ ನಿರ್ಬಂಧಗಳನ್ನು ವಿಧಿಸಿದೆ. ಇದನ್ನೂ ಓದಿ: ಸಿದ್ದು ವಿರುದ್ಧ ಶ್ರೀರಾಮುಲು ವಾಗ್ದಾಳಿ- ಕೆಲವೇ ನಿಮಿಷದಲ್ಲಿ ಟ್ವೀಟ್ ಡಿಲೀಟ್