ಬೆಂಗಳೂರು: ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ (Menstrual leave) ನೀಡಿದ್ದ ಸರ್ಕಾರದ (State Govt) ಆದೇಶಕ್ಕೆ ಇದೀಗ ಹೈಕೋರ್ಟ್ (High Court) ಮಧ್ಯಂತರ ತಡೆ ನೀಡಿದೆ.
ಸರ್ಕಾರದ ಮಹತ್ವದ ಆದೇಶ ಪ್ರಶ್ನಿಸಿ ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ನೀಡಿದೆ. ಚಳಿಗಾಲದ ರಜೆ ಮುಗಿದ ಬಳಿಕ ಆಕ್ಷೇಪಣೆ ಸಲ್ಲಿಸುವಂತೆ ತಿಳಿಸಿ, ಮಧ್ಯಂತರ ತಡೆ ನೀಡಿದೆ.ಇದನ್ನೂ ಓದಿ: ಸರ್ಕಾರಿ ಶಾಲೆ-H8 ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ ಗಿಲ್ಲಿ ತಂದೆ ತಾಯಿ
2025ರ ನ.20ರಂದು ರಾಜ್ಯ ಸರ್ಕಾರವು ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡಬೇಕು ಎಂದು ಆದೇಶಿಸಿತ್ತು. ಜೊತೆಗೆ ಷರತ್ತುಗಳನ್ನ ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿತ್ತು.

