ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿ ನಿಗಮದ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಋತುಚಕ್ರ ರಜೆಯನ್ನು (Menstrual Leave) ಮಂಜೂರು ಮಾಡಿದೆ.
ಜನವರಿ 1ರಿಂದ ಜಾರಿಗೆ ಬರುವ ಈ ಆದೇಶದ ಅಡಿಯಲ್ಲಿ, ಅರ್ಹ ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದ ರಜೆಯನ್ನು ಪಡೆಯಬಹುದು. 2026ರ ಜನವರಿ 1ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಸೇರಿದಂತೆ ಮಹಿಳಾ ನೌಕರರು ಋತುಚಕ್ರದ ರಜೆ ತೆಗೆದುಕೊಳ್ಳಬಹುದು ಎಂದು ತಿಳಿಸಲಾಗಿದೆ. 18-52 ವರ್ಷದ ಮಹಿಳಾ ನೌಕರರು ಈ ರಜೆ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಇದನ್ನೂ ಓದಿ: ಮುಡಾ ಸೈಟ್ ಅಕ್ರಮ ಕೇಸ್ – ಜ.5ಕ್ಕೆ ವಿಚಾರಣೆ ಮುಂದೂಡಿಕೆ

ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ತಂದೆಯಿಂದಲೇ ಗರ್ಭಿಣಿ ಮಗಳ ಮರ್ಯಾದಾ ಹತ್ಯೆ – ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು, ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು| ಪತ್ನಿ ಜೊತೆ ಜಗಳ; ಗನ್ ತೆಗೆದು ಶೂಟೌಟ್ ಮಾಡಿದ ಪತಿ – ಮಹಿಳೆ ಸಾವು

