ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

Public TV
1 Min Read
bengaluru

ಬೆಂಗಳೂರು: ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ 3 ದಿನಗಳಿಂದ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಬಿಹಾರ ಮೂಲದ ನೋವಾಕುಮಾರಿ (25) ಮೃತ ಮಹಿಳೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಆರ್ಮೋರ್ ಪ್ಲಾಸ್ಟಾ ಮೆಡಿ ಡಿವೈಸ್ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದರು. ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅತ್ತಿಬೆಲೆ ಸಮೀಪದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಸೋಮವಾರ ಅವರನ್ನು ಆಪರೇಶನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿ 2 ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

3 ದಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಇದೀಗ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಆಗಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

Web Stories

Share This Article