ಬೆಂಗಳೂರು: ವಿನಾಕಾರಣ ಬಿಬಿಎಂಪಿ ಕಂದಾಯಾಧಿಕಾರಿಗಳಿಗೆ ಮಾನಸಿಕವಾಗಿ ಹಿಂಸೆ ನೀಡಲಾಗುತ್ತಿದೆ. ಹೀಗಾಗಿ ಜೀವ ರಕ್ಷಣೆ ಮಾಡಿ ಎಂದು ಸಂಘದ ಅಧ್ಯಕ್ಷ ಎ.ಅಮೃತ್ ರಾಜ್ ಮನವಿ ಮಾಡಿಕೊಂಡರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಇಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ನೌಕರರ ಭವನದಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಬಿಬಿಎಂಪಿ ನೀಡಿರುವ ದೂರಿನನ್ವಯ ಕಂದಾಯಾಧಿಕಾರಿಗಳನ್ನು ರೆಪ್ರೆಸೆಂಟೇಷನ್ ಆಫ್ ಪಬ್ಲಿಕ್ ಆಕ್ಟ್ ಪ್ರಕಾರ ಏಕಾಏಕಿ ಬಂಧಿಸಿರುವುದು ಸೂಕ್ತವಲ್ಲ. ಬದಲಿಗೆ ಅಕ್ರಮ ಎಸಗಿದೆ ಎನ್ನಲಾದ ಚಿಲುಮೆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಮತ್ತು CEO ನಡೆಸುವ ತನಿಖೆಗೆ ಸಿದ್ಧವಿದ್ದು ಅವರಿಗೆ ಮಾನಸಿಕವಾಗಿ ಹಿಂಸೆ ನೀಡಬಾರದು ಎಂದರು.
Advertisement
Advertisement
ಯಾವುದಾದರೂ ಒಂದು ಸಂಸ್ಥೆ ತನಿಖೆಯನ್ನು ಮಾಡಲಿ ಎರಡು-ಮೂರು ಪೊಲೀಸ್ ಠಾಣೆಗಳು ಅಥವಾ ವಿವಿಧ ಸಂಸ್ಥೆಗಳು ಭಾಗಿಯಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ನೀಡಬಾರದು. ರೆಪ್ರೆಸೆಂಟೇಷನ್ ಆಫ್ ಪಬ್ಲಿಕ್ ಆಕ್ಟ್ ಪ್ರಕಾರ ಬಿಬಿಎಂಪಿ ದೂರು ದಾಖಲಿಸಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಅಧಿಕಾರಿ ದೂರು ದಾಖಲಿಸಬೇಕು. ಇಲ್ಲಿ ಪ್ರೊಸಿಜರ್ ಎರರ್ ಆಗಿದೆ ಎಂದರು.
Advertisement
Advertisement
ಚಿಲುಮೆ ಸಂಸ್ಥೆ BLO ಗುರುತಿನ ಚೀಟಿಯನ್ನು ನಕಲಿ ಮಾಡಿ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಬಿಬಿಎಂಪಿ ಕಂದಾಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿರುವುದು ಕಾನೂನಿನ ಪ್ರಕಾರ ಅಸಮಂಜಸ ಎಂದು ಹೇಳಿದರು.
ದತ್ತಾಂಶ ಕಳವು ಪ್ರಕರಣದಲ್ಲಿ ಚಿಲುಮೆ ಸಂಸ್ಥೆ (Chilume) ಭಾಗಿಯಾಗಿರುವ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತದಾರರ ಪಟ್ಟಿಯಲ್ಲಿ ದತ್ತಾಂಶ ಕಳವು ಮತ್ತು ಮತದಾರರನ್ನು ತೆಗೆದು ಹಾಕಿರುವ ಬಗ್ಗೆ ಪೊಲೀಸರು ಮೊಕದ್ದಮೆ ದಾಖಲಿಸಿ ಅಧಿಕಾರಿಗಳನ್ನು ಬಂಧಿಸುತ್ತಿರುವುದು ಸೂಕ್ತವಲ್ಲ. ಬಿಬಿಎಂಪಿ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಮತ್ತು ಪುನರಾವರ್ತನೆಯಾಗಿರುವ ಹೆಸರುಗಳನ್ನು ಮಾತ್ರ ತೆಗೆದು ಹಾಕಲಾಗಿದೆ ಎಂದು ತಿಳಿಸಿದರು.
ಈ ವೇಳೆ ಸಂಘದ ಉಪ ಆಯುಕ್ತರಾದ ಲಕ್ಷ್ಮೀದೇವಿ, ವಕೀಲರಾದ ಶ್ರೀನಿವಾಸ್, ಅಧಿಕಾರಿಗಳಾದ ಕೆ.ಜಿ.ರವಿ,ಶಾಂತೇಶ್, ಸಂಘದ ಪದಾಧಿಕಾರಿಗಳಾದ ಎಸ್.ಜಿ.ಸುರೇಶ್, ಸಾಯಿಶಂಕರ್, ರಾಮಚಂದ್ರ,ಕೆ.ಮಂಜೇಗೌಡ, ಸಂತೋಷ್ ಕುಮಾರ್ ನಾಯಕ್, ರುದ್ರೇಶ್, ನರಸಿಂಹ, ಬಾಬಣ್ಣ ಪಾಲ್ಗೊಂಡಿದ್ದರು.