ಹೈದರಾಬಾದ್: ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ವಿಫಲವಾಗಿ ರಕ್ತದ ಮಡುವಿನಲ್ಲಿ ಪತ್ತೆಯಾಗಿರುವ ಘಟನೆ ಹೈದರಾಬಾದ್‍ನ ಹೊರವಲಯದಲ್ಲಿರುವ ಅಬ್ದುಲ್ಲಾಪುರ್‍ಮೆಟ್‍ನ ಜೆಎನ್‍ಆರ್ ಕಾಲೋನಿಯಲ್ಲಿ ನಡೆದಿದೆ.
ವ್ಯಕ್ತಿಯನ್ನು ನರಸಿಂಹ ಎಂದು ಗುರುತಿಸಲಾಗಿದ್ದು, ಪ್ಲಂಬರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಮಂಗಳವಾರ ರಾತ್ರಿ ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಅವರ ಮನೆಯ ಎದುರುಗಡೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೆರೆಹೊರೆಯವರು ಕಂಡಿದ್ದಾರೆ. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ಅಪ್ರಾಮಾಣಿಕ ವ್ಯಕ್ತಿ: ಅರವಿಂದ್ ಕೇಜ್ರಿವಾಲ್
Advertisement
Advertisement
ಮಾನಸಿಕ ಅಸ್ವಸ್ಥ ತನ್ನ ಮನೆಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಆತನ ಪತ್ನಿ ಬೇರೊಬ್ಬರನ್ನು ಮದುವೆಯಾಗಿ ತನ್ನ ಮಕ್ಕಳನ್ನು ಕರೆದುಕೊಂಡು ಹೋಗಿದ್ದಳು. ಇದರಿಂದ ನರಸಿಂಹ ಖಿನ್ನತೆಗೆ ಒಳಗಾಗಿ ಮದ್ಯದ ಅಮಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಡಾಖ್‌ನಲ್ಲಿ ಚೀನಾದಿಂದ ಪ್ಯಾಂಗ್ಯಾಂಗ್ ಸೇತುವೆ ನಿರ್ಮಾಣ – ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
Advertisement
ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲಲ್ಲ. ಈ ಮುನ್ನ ತನ್ನ ಸಹೋದರಿಯ ಮನೆಯಲ್ಲಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ ಮತ್ತು ಚಿಕಿತ್ಸೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಗ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಕತ್ತರಿ ಹಿಡಿದು ತನ್ನ ಕತ್ತು ಸೀಳಿಕೊಳ್ಳಲು ಪ್ರಯತ್ನಿಸಿದ್ದನು.