ಬೆಂಗಳೂರು: ಟಿಪ್ಪು ಜಯಂತಿ ಆಮಂತ್ರಣದಲ್ಲಿ ಹೆಸರು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಟಿಪ್ಪು ಜಯಂತಿ ರಾಜ್ಯ ಸರ್ಕಾರದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಚಾರದಂತೆ ಹೆಸರು ಮುದ್ರಣ ಮಾಡಿದ್ದು, ಆಹ್ವಾನ ನೀಡುತ್ತೇವೆ. ಸಮಾರಂಭಕ್ಕೆ ಬರೋದು ಬಿಡೋದು ಅವರಿಗೆ ಬಿಟ್ಟ ವಿಚಾರ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.
Advertisement
ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಕರ್ನಾಟಕ ಸರ್ಕಾರದ ಶಿಷ್ಟಾಚಾರ ವಿಭಾಗದ ಮುಖ್ಯ ಕಾರ್ಯದರ್ಶಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರಿಗೆ ತನ್ನ ಆಪ್ತ ಸಹಾಯಕ ರಮೇಶ್ ಮೂಲಕ ಪತ್ರ ಕಳುಹಿಸಿದ್ದರು.
Advertisement
Advertisement
ಇದೇ ತಿಂಗಳ 14ರಂದು ಈ ಪತ್ರ ಕಳುಹಿಸಲಾಗಿದ್ದು ನವೆಂಬರ್ 10ರಂದು ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ರಾಜ್ಯದ ಯಾವುದೇ ಕಾರ್ಯಕ್ರಮದಲ್ಲಾಗಲೀ ಹಾಗೂ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕದಂತೆ ಪತ್ರ ಬರೆದಿದ್ದರು. ಟಿಪ್ಪು ಜಯಂತಿಗೆ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದ ಅನಂತ್ ಕುಮಾರ್ ಹೆಗಡೆ, `ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಕಾರಣದಿಂದಾಗಿ ನನ್ನ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ’ ಎಂದು ಆಪ್ತಕಾರ್ಯದರ್ಶಿ ಮೂಲಕ ಕಳುಹಿಸಿರುವ ಪತ್ರದಲ್ಲಿ ತಿಳಿಸಿದ್ದರು.
Advertisement
ಕಳೆದ ಬಾರಿಯೂ ಟಿಪ್ಪು ಜಯಂತಿ ಆಹ್ವಾನ ಪತ್ರಿಕೆಯಲ್ಲಿ ತನ್ನ ಹೆಸರನ್ನು ಹಾಕದಂತೆ ಪತ್ರ ಬರೆದಿದ್ದಲ್ಲದೇ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಡಳಿತ ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಕೂಡ ಭಾಗಿಯಾಗದೇ ಟಿಪ್ಪು ಜಯಂತಿಗೆ ಸಂಸದ ಅನಂತ ಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದರು.