ಹಾಸನ: ಕೂಲಿಕಾರ್ಮಿಕರೊಬ್ಬರು ನಿರ್ಮಾಣ ಹಂತದ ಅಣೆಕಟ್ಟು ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟೆಬೆಳಗುಲಿ ಗ್ರಾಮದ ಬಳಿ ನಡೆದಿದೆ.
ಮಂಜೇಗೌಡ (45) ಮೃತ ಕೂಲಿಕಾರ್ಮಿಕ. ಕಟ್ಟೆಬೆಳಗುಲಿ ಗ್ರಾಮದ ಸಮೀಪ ಹರಿಯುತ್ತಿರುವ ಹೇಮಾವತಿ ನದಿಗೆ ಅಣೆಕಟ್ಟು ಕಟ್ಟುವ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಸುಮಾರು 20 ಅಡಿ ಎತ್ತರಕ್ಕೆ ಕೂಲಿ ಕಾರ್ಮಿಕನನ್ನು ಕಬ್ಬಿಣದ ಕಂಬಿಗಳನ್ನು ಹಿಡಿದು ಮೇಲಕ್ಕೆ ಹತ್ತಿಸಿದ್ದರು. ಈ ವೇಳೆ ತಲೆಗೆ ಅವರಿಗೆ ಹೆಲ್ಮೆಟ್ ನೀಡಿರಲಿಲ್ಲ. ಸುರಕ್ಷತಾ ಬಲೆಯನ್ನು ಕೂಡಾ ಅಳವಡಿಸಿರಲಿಲ್ಲ. ಇದನ್ನೂ ಓದಿ: ಚಂದನವನದಲ್ಲಿ ಲವ್ಲಿ ವ್ಯಾಲೆಂಟೈನ್ಸ್ ಡೇ – ಅಭಿಮಾನಿಗಳೊಂದಿಗೆ ಹಂಚಿಕೊಂಡ್ರು ಸ್ಪೆಷಲ್ ಫೋಟೋ!
Advertisement
Advertisement
ಮಂಜೇಗೌಡರವರು ಕೆಲಸ ಮಾಡುವ ವೇಳೆ ಆಯತಪ್ಪಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ. ಕೂಲಿಕಾರ್ಮಿಕನ ಸಾವಿಗೆ ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಿಕರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ
Advertisement
ಘಟನೆಯು ಹೊಳೆನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.