Connect with us

ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ದುರ್ಮರಣ

ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ದುರ್ಮರಣ

ಬೆಂಗಳೂರು: ಸೋಮವಾರ ರಾತ್ರಿ ಎಂಇಎಸ್ ಮಾಜಿ ಶಾಸಕ ಸಾಂಬಾಜಿ ಪಾಟೀಲ್ ಪುತ್ರ ರೈಲಿನಿಂದ ಬಿದ್ದು ಮೃತಪಟ್ಟಿದ್ದಾರೆ.

ಸಾಗರ್ ಸಾಂಬಾಜಿ ಪಾಟೀಲ್ (38) ಸಾವನ್ನಪ್ಪಿದ ದುರ್ದೈವಿ. ಸಾಗರ್ ಸಾಂಬಾಜಿ ಪಾಟೀಲ್ ಸೋಮವಾರ ರಾತ್ರಿ ಸ್ನೇಹಿತರ ಜೊತೆ ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದರು. ರಾಣಿ ಚೆನ್ನಮ್ಮ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಳಗಾವಿಗೆ ಹೊರಟಿದ್ದ ಸಾಗರ್, ರೈಲು ಶ್ರೀರಾಮಪುರದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಲಿನಿಂದ ಕೆಳಗೆ ಬಿದ್ದಿದ್ದಾರೆ.

ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸಾಗರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಬೆಂಗಳೂರು ಸಿಟಿ ರೈಲ್ವೆ ಸ್ಟೇಷನ್ ನಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Advertisement
Advertisement