ದೋಹಾ: ಡಿಸೆಂಬರ್ 18 ರಂದು ನಡೆಯುವ ಫಿಫಾ ವಿಶ್ವಕಪ್ 2022 ರ (FIFA World Cup 2022) ಫೈನಲ್ ಪಂದ್ಯ ತನ್ನ ಕೊನೆಯ ಆಟ ಎಂದು ಅರ್ಜೆಂಟಿನಾ (Argentina) ತಂಡದ ನಾಯಕ ಹಾಗೂ ಖ್ಯಾತ ಫುಟ್‌ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ತಿಳಿಸಿದ್ದಾರೆ. ಆ ಮೂಲಕ ತಮ್ಮ ನಿವೃತ್ತಿಯನ್ನು ಖಚಿತಪಡಿಸಿದ್ದಾರೆ.
ಫೈನಲ್‌ನಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡುವ ಮೂಲಕ ವಿಶ್ವಕಪ್ ಪ್ರಯಾಣವನ್ನು ಪೂರ್ಣಗೊಳಿಸಲು ಇಚ್ಛಿಸಿದ್ದೇನೆ ಎಂದು ಮೆಸ್ಸಿ ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಸಾಧನೆ ಎಲ್ಲರಿಗೂ ಗೊತ್ತು – ರೊನಾಲ್ಡೊಗೆ ಭಾವನಾತ್ಮಕ ಸಂದೇಶ ರವಾನಿಸಿದ ಕೊಹ್ಲಿ
Advertisement
Advertisement
ಹಲವು ವರ್ಷಗಳ ನಂತರ ಮುಂದಿನ ವಿಶ್ವಕಪ್ ಪಂದ್ಯ ನಡೆಯುತ್ತದೆ. ಅಲ್ಲಿ ಇಂಥಹ ಸಾಧನೆ ಮಾಡಲು ಆಗುವುದಿಲ್ಲ ಎಂದು ನನಗೆ ಎನ್ನಿಸುತ್ತಿದೆ. ಹೀಗಾಗಿ ವಿದಾಯ ಹೇಳುವುದು ಉತ್ತಮ ಎನಿಸುತ್ತಿದೆ ಎಂದು ಮೆಸ್ಸಿ ಸ್ಪಷ್ಟಪಡಿಸಿದ್ದಾರೆ. 35 ವರ್ಷ ವಯಸ್ಸಿ ಮೆಸ್ಸಿ ಈ ಬಾರಿ ತಮ್ಮ ಐದನೇ ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ.
Advertisement
Advertisement
ನಿನ್ನೆ ನಡೆದ ಫಿಫಾ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 3-0 ಗೋಲುಗಳಿಂದ ಕ್ರೊವೇಷಿಯಾವನ್ನು ಅರ್ಜೆಂಟಿನಾ ತಂಡ ಮಣಿಸಿತ್ತು. ತಂಡವನ್ನು ಸದ್ಯ ಮೆಸ್ಸಿ ಮುನ್ನಡೆಸಿದರು. ಭಾನುವಾರ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಮೆಸ್ಸಿ ಆಟ ನೋಡಲು ಕಿಕ್ಕಿರಿದ ಅಭಿಮಾನಿಗಳು – 28 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟೊಂದು ಜನ!