LatestLeading NewsMain PostSmartphonesTech

ಬರೋಬ್ಬರಿ 11,000 ಉದ್ಯೋಗಿಗಳನ್ನು ವಜಾಗೊಳಿಸಿದ ಮೆಟಾ

ವಾಷಿಂಗ್ಟನ್: ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್ ಫೇಸ್‌ಬುಕ್‌ನ (Facebook) ಮಾತೃ ಕಂಪನಿ ಮೆಟಾ (Meta) ತನ್ನ ಕಂಪನಿಯ ಶೇ.13 ರಷ್ಟು ಅಂದರೆ 11 ಸಾವಿರಕ್ಕೂ ಹೆಚ್ಚು ಉದ್ಯೋಗಿಳನ್ನು (Employees) ವಜಾಗೊಳಿಸಿದೆ (layoffs).

ಈ ಬಗ್ಗೆ ತಿಳಿಸಿರುವ ಮೆಟಾದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮಾರ್ಕ್ ಜುಕರ್‌ಬರ್ಗ್ (Mark Zuckerberg), ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವ ನಿರ್ಧಾರಕ್ಕೆ ಹೇಗೆ ಬಂದಿದ್ದೇವೆ ಎಂಬುದಕ್ಕೆ ನಾನು ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುತ್ತೇನೆ. ಈ ನಿರ್ಧಾರ ಎಲ್ಲರಿಗೂ ಕಷ್ಟ ತಂದಿದೆ ಎಂಬುದು ನನಗೆ ತಿಳಿದಿದೆ. ವಜಾಗೊಳಗಾಗುತ್ತಿರುವವರ ಬಗ್ಗೆ ನಾನು ವಿಷಾದಿಸುತ್ತೇನೆ ಎಂದಿದ್ದಾರೆ.

2004 ರಲ್ಲಿ ಫೇಸ್‌ಬುಕ್ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಕಂಪನಿಯಲ್ಲಿ ನಡೆದಿರುವ ವಜಾದ ಪ್ರಕ್ರಿಯೆಯಲ್ಲಿ ಇದು ಅತ್ಯಂತ ದೊಡ್ಡ ಮಟ್ಟದ್ದಾಗಿದೆ. ಸುಮಾರು 87 ಸಾವಿರ ಉದ್ಯೋಗಿಗಳು ಇರುವ ಫೇಸ್‌ಬುಕ್‌ನಲ್ಲಿ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ್ದರೂ, ಹೊಸ ನೇಮಕಾತಿಯನ್ನು ನಡೆಸಲು ಸಿದ್ಧವಾಗಿದೆ ಎಂದು ಕಂಪನಿ ತಿಳಿಸಿದೆ. ಇದನ್ನೂ ಓದಿ: ರಷ್ಯಾ ಆಕ್ರಮಣದಿಂದ ನಾಶವಾದ ವಿಶ್ವದ ದೈತ್ಯ ವಿಮಾನ ಮರು ನಿರ್ಮಾಣಕ್ಕೆ ಉಕ್ರೇನ್ ಚಿಂತನೆ

ಕಂಪನಿ ಆರ್ಥಿಕ ಕುಸಿತ ಹಾಗೂ ಹೆಚ್ಚಿನ ಸ್ಪರ್ಧೆಗಳಿಂದಾಗಿ ಜಾಹೀರಾತುಗಳ ನಷ್ಟವನ್ನು ಅನುಭವಿಸುತ್ತಿದ್ದು, ದೊಡ್ಡ ಮಟ್ಟದಲ್ಲಿ ವಜಾ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಆದರೂ ಹೊಸ ಉದ್ಯೋಗಿಗಳಿಗೆ ನೇಮಕಾತಿಯನ್ನು 2023ರ ಮಾರ್ಚ್ ವರೆಗೆ ತಡೆಹಿಡಿಯಲಾಗಿದ್ದು, ಬಳಿಕ ಅದನ್ನು ವಿಸ್ತರಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಡಿಗ್ರಿ ಬಳಿಕ ಮುಂದೇನು? – ಪಬ್ಲಿಕ್ ಟಿವಿ ವಿದ್ಯಾ ಮಂದಿರಕ್ಕೆ ಬನ್ನಿ

Live Tv

Leave a Reply

Your email address will not be published. Required fields are marked *

Back to top button