ಬೆಂಗಳೂರು: ರಾಜ್ಯದಲ್ಲಿ (Karnataka) ಕೈಕೊಟ್ಟಿದ್ದ ಮುಂಗಾರು ಇಂದಿನಿಂದ ಚುರುಕುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಮುಂದಿನ 4 – 5 ದಿನಗಳ ಕಾಲ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ (Bengaluru) ಹಗುರವಾಗಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೇ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ 15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಮುಂಬೈನಿಂದ ಮೆಜೆಸ್ಟಿಕ್‍ಗೆ ಆಗಮಿಸಿದ್ದ ರೈಲಿನಲ್ಲಿ ಬೆಂಕಿ – 2 ಬೋಗಿಗಳು ಸಂಪೂರ್ಣ ಭಸ್ಮ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಮಲೆನಾಡಿನ ಭಾಗವಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾರೀ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಉಳಿದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಕಲಬುರಗಿ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಕುಂಠಿತಗೊಂಡಿದ್ದ ಮುಂಗಾರು ಚುರುಕುಗೊಳ್ಳುವ ಭರವಸೆ ಮೂಡಿದೆ. ಇದನ್ನೂ ಓದಿ: ಮಹೀಂದ್ರಾ ಎಕ್ಸ್‌ಯುವಿ ಸ್ಪೋರ್ಟ್ಸ್‌ನಲ್ಲಿ ತಾಂತ್ರಿಕ ಸಮಸ್ಯೆ- ಬಗೆಹರಿಸುವ ಭರವಸೆ ನೀಡಿದ ಸಂಸ್ಥೆ
Web Stories