ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಸೆ.24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಕೋವಿಡ್ 19, ಭಯೋತ್ಪಾದನೆ, ಹವಾಮಾನ ವೈಪರೀತ್ಯ ಬಗ್ಗೆ ಮಾತನಾಡುತ್ತೇನೆ – ಮೋದಿ
Advertisement
Advertisement
ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾತ್ರ ಮುಂದಿನ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಮಲೆಮಹದೇಶ್ವರ ಬೆಟ್ಟ 5 ವರ್ಷಗಳಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾಗಲಿದೆ: ಬೊಮ್ಮಾಯಿ
Advertisement
ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.