ಬೆಂಗಳೂರು: ಬಾಲಿವುಡ್, ಸ್ಯಾಂಡಲ್‍ವುಡ್ ಆಯ್ತು, ಈಗ ಬಿಬಿಎಂಪಿಯಲ್ಲೂ ಮೀಟೂ ಆರೋಪ ಕೇಳಿ ಬಂದಿದೆ. ಕೆಲಸದ ವೇಳೆ ಪೌರ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟವಾಗಿದೆ.
ಹೆಸರು ಹೇಳಲು ಇಚ್ಚಿಸದ ವ್ಯಕ್ತಿಯೊಬ್ಬರು, ಪೌರಕಾರ್ಮಿಕೆಯಾಗಿ ಕೆಲಸ ಮಾಡುವ ತನ್ನ ಅತ್ತೆಗೆ, ಪಾಲಿಕೆ ಅಧಿಕಾರಿಗಳಿಂದ ಆಗುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.
Advertisement
Advertisement
ಪೋಸ್ಟ್‌ನಲ್ಲಿ ಏನಿದೆ?
ಬಡವರು ಪೌರಕಾರ್ಮಿಕ ಕೆಲಸಕ್ಕಾಗಿ ಬರುತ್ತಾರೆ. ಆದರೆ ನೀಚ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡ್ತಾರೆ. ನನ್ನ ಅತ್ತೆಯನ್ನು ಕೂಡಾ ನೀಚ ಅಧಿಕಾರಿಗಳು ಕಾಮಾಲೆ ಕಣ್ಣಿಂದ ನೋಡುತ್ತಾರೆ. ಈ ಬಗ್ಗೆ ಒಂದು ಗಂಟೆಗಳ ಕಾಲ ನಮ್ಮತ್ತೆ ಕಣ್ಣೀರು ಹಾಕಿದ್ದಾರೆ. ಇವರ ಕಾಮಚೇಷ್ಟೆಗೆ ಬಿಬಿಎಂಪಿ ಯಾವಾಗ ಬ್ರೇಕ್ ಹಾಕುತ್ತೆ?
Advertisement
ಬೆಂಗಳೂರಿನ ಪೌರಕಾರ್ಮಿಕರ ಮೇಲೆ ನಿತ್ಯ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ. ಅನಕ್ಷರಸ್ಥರು ಎಂಬ ಕಾರಣಕ್ಕೆ ಅಧಿಕಾರಿಗಳು ಅವರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ಹೇಳಿದ ಹಾಗೆ ಕೇಳದಿದ್ದರೆ ಹಾಜರಾತಿ ಕಟ್ ಮಾಡುತ್ತಾರೆ. ಪೌರಕಾರ್ಮಿಕರ ಬಳಿ ಸ್ಮಾರ್ಟ್ ಫೋನ್ ಇಲ್ಲ, ಇಲ್ಲದಿದ್ದರೆ ಎಲ್ಲರ ಮುಖವಾಡ ಬಯಲಾಗುತ್ತಿತ್ತು ಎಂದು ಬರೆದುಕೊಂಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv