ಬೆಂಗಳೂರು: ನಟ ಅರ್ಜುನ್ ಸರ್ಜಾ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಿದೆ. ಅಲ್ಲಿಯವರೆಗೂ ಅರ್ಜುನ್ ಸರ್ಜಾ ವಿರುದ್ಧ ಯಾವುದೇ ಕ್ರಮಕೈಗೊಳ್ಳದಂತೆ ನ್ಯಾಯಾಲಯ ಆದೇಶಿಸಿದೆ.
ವಿಸ್ಮಯ ಚಿತ್ರೀಕರಣದ ವೇಳೆ ಶೃತಿ ಹರಿಹರನ್ ತಮಗಾದ ಲೈಂಗಿಕ ಕಿರುಕುಳದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಶೃತಿ ಹರಿಹರನ್ ದೂರು ನೀಡಿದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ ಐಪಿಸಿ ಸೆಕ್ಷನ್ 509(ಮಹಿಳೆಗೆ ಅವಮಾನಿಸುವಂತೆ ಮಾತನಾಡುವುದು) 354(ಅತ್ಯಾಚಾರ ಉದ್ದೇಶದಿಂದ ಹಲ್ಲೆ), 354ಎ(ಲೈಂಗಿಕವಾಗಿ ಸಹಕರಿಸಲು ಒತ್ತಾಯ) ಅಡಿ ಎಫ್‍ಐಆರ್ ದಾಖಲಾಗಿದೆ. ಈ ಎಫ್‍ಐಆರ್ ರದ್ದುಗೊಳಿಸಬೇಕೆಂದು ಕೋರಿ ಅರ್ಜುನ್ ಸರ್ಜಾ ಹೈಕೋರ್ಟ್ ಬಾಗಿಲು ತಟ್ಟಿದ್ದರು.
Advertisement
Advertisement
ಹೆಬ್ಬಾಳ ಹಾಗೂ ದೇವನಹಳ್ಳಿಯಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ತನಗಾದ ಅನ್ಯಾಯವಾದ ದೌರ್ಜನ್ಯದ ಬಗ್ಗೆ ಶೃತಿ ಪೊಲೀಸರಿಗೆ ದೂರು ನೀಡಿದ್ದರು. ಯುಬಿ ಸಿಟಿಗೆ ಚಿತ್ರದ ಬಗ್ಗೆ ಮಾತನಾಡಲು ಕರೆದಿದ್ದು, ಊಟಕ್ಕೆ ಕರೆದುಕೊಂಡು ಹೋಗಿದ್ದರು. ಯುಬಿ ಸಿಟಿಯ ಪಬ್‍ವೊಂದರಲ್ಲಿ ಊಟ ಮಾಡಿದ್ದೆವು. ಈ ವೇಳೆ ನನ್ನ ದೇಹ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದರು. ಲೈಂಗಿಕವಾಗಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದರು. ಲೈಂಗಿಕ ತೃಷೆಗಾಗಿ ರೆಸಾರ್ಟ್ ಗೆ ಕರೆದಿದ್ದರು ಎಂದು ಶೃತಿ ದೂರಿನಲ್ಲಿ ಉಲ್ಲೇಖಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv