ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ಗಳು (Metro Pillar) ಬೆಂಗಳೂರಿನ (Bengaluru) ನಾಗವಾರ ಬಳಿ ದಿಢೀರ್ ಉರುಳಿದ್ದು, ಪರಿಣಾಮ ಬೈಕ್ನಲ್ಲಿ ಹೋಗುತ್ತಿದ್ದ ತಾಯಿ, ಮಗು ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ಈ ಘಟನೆ ನಡೆದಿದೆ. ನಾಗವಾರ ರಿಂಗ್ ರೋಡ್ನ ಎಚ್ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್ ಏಕಾಏಕಿ ರಸ್ತೆಗೆ ಬಿದ್ದಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಪತಿ, ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್ ಮೇಲೆ ಬಿದ್ದಿದೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭಾರೀ ಭೂಕಂಪನ
Advertisement
Advertisement
ಇದರ ಪರಿಣಾಮ ವಿಹಾನ್ ಹಾಗೂ ತೇಜಸ್ವಿನಿಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಾಯಿ, ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ಬೈಕ್ನಲ್ಲಿದ್ದ ತೇಜಸ್ವಿನಿ ಪತಿಯ ಸ್ಥಿತಿಯು ಚಿಂತಾಜನಕವಾಗಿದೆ.
Advertisement
ಇನ್ನೂ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಬ್ಬ, ಹರಿದಿನದಂದು ಕೆಲಸ ಮಾಡುವ ಸಿಬ್ಬಂದಿಗೆ KSRTCಯಿಂದ ಬಂಪರ್ ಗಿಫ್ಟ್
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k