ಬೆಂಗಳೂರು: ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಇಂದು ಟಿ20 ಸರಣಿಯ ಅಂತಿಮ ಹಾಗೂ 2ನೇ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಪರಿಣಾಮ ಬಿಎಂಆರ್‌ಸಿಎಲ್ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿದೆ.
ಈ ಕುರಿತು ಬಿಎಂಆರ್‌ಸಿಎಲ್ ಮಾಹಿತಿ ನೀಡಿದ್ದು, ರಾತ್ರಿ 12 ಗಂಟೆಯವರೆಗೂ ಕೂಡ ಮೆಟ್ರೋ ಸಂಚಾರ ಲಭ್ಯವಾಗಲಿದೆ. ಅಲ್ಲದೇ ಮಧ್ಯಾಹ್ನ 3 ಗಂಟೆಯಿಂದ ಸಂಜೆ 7 ಗಂಟೆವರೆಗೂ ವಿಶೇಷ 50 ರೂ. ಪೇಪರ್ ಟಿಕೆಟ್ ಖರೀದಿ ಮಾಡಲು ಅವಕಾಶ ನೀಡಲಾಗಿದೆ. ಈ ಪೇಪರ್ ಟಿಕೆಟ್ ಬಳಸಿ ಯಾವುದೇ ನಿಲ್ದಾಣಕ್ಕಾದರೂ ಪ್ರಯಾಣಿಸಬಹುದು .
Advertisement
Advertisement
ಪಂದ್ಯಾವಳಿ ನಂತರ ಟಿಕೆಟ್ ಗಾಗಿ ಸಾಲು ನಿಲ್ಲುವುದನ್ನು ತಪ್ಪಿಸಲು ಪೇಪರ್ ಟಿಕೆಟ್ ವ್ಯವಸ್ಥೆ ಜಾರಿಗೆ ಮಾಡಿರುವುದಾಗಿ ಮೆಟ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಸ್ಮಾಟ್‍ಕಾರ್ಡ್ ಹೊಂದಿರುವವರು ಎಂದಿನಂತೆಯೇ ಪ್ರಯಾಣಿಸಬಹುದು. ಪ್ರಮುಖವಾಗಿ ನಾಗಸಂದ್ರ, ಮೈಸೂರು ರಸ್ತೆ, ಬೈಯಪ್ಪನಹಳ್ಳಿ ಹಾಗೂ ಯಲಚೇನಹಳ್ಳಿ ನಿಲ್ದಾಣಗಳಿಂದ ರಾತ್ರಿ 11.55ಕ್ಕೆ ಕೊನೆಯ ರೈಲು ಹೊರಡಲಿದೆ.
Advertisement
ಕೊಹ್ಲಿ ನಾಯಕತ್ವದ ತಂಡಕ್ಕೆ ಈ ಪಂದ್ಯ ಮಹತ್ವದಾಗಿದ್ದು, ಸರಣಿ ಸೋಲಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮಾಡು ಇಲ್ಲವೇ ಮಡಿ ಹೋರಾಟ ನಡೆಸಬೇಕಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ಇತ್ತಂಡಗಳು ಎದುರಾಗುತ್ತಿವೆ. ವಿಶಾಖಪಟ್ಟಣ ಪಂದ್ಯದಲ್ಲಿ ರೋಚಕ ಗೆಲುವು ಪಡೆದ ಆಸೀಸ್ ಪಡೆ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ.
Advertisement
ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv