ಬೆಂಗಳೂರು: ನಾಳೆ (ಜೂ.21) ವಿಶ್ವ ಯೋಗ ದಿನದ ಹಿನ್ನೆಲೆ ಬೆಳಿಗ್ಗೆ 5 ಗಂಟೆಯಿಂದಲೇ ಮೆಟ್ರೋ (Namma Metro) ಸಂಚಾರ ಆರಂಭವಾಗಲಿದೆ.
ಸಾಮಾನ್ಯವಾಗಿ ಪ್ರತಿ ಭಾನುವಾರದಂದು ಬೆಳಿಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗುತ್ತಿತ್ತು. ಆದರೆ ನಾಳೆ ವಿಶ್ವ ಯೋಗ ದಿನದ (World Yoga Day) ಹಿನ್ನೆಲೆ ಬೆಳಿಗ್ಗೆ 5 ಗಂಟೆ ಮೆಟ್ರೋ ಸಂಚಾರ ಆರಂಭವಾಗಲಿದೆ.
ದಿ. 21ನೇ ಜೂನ್ 2026ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮೆಟ್ರೋ ರೈಲು ಸೇವೆ ಬೆಳಿಗ್ಗೆ 5:00 ಗಂಟೆಯಿಂದ ಆರಂಭ
Early Metro Services on Sunday, 21st June 2026 for International Yoga Day. ಹೆಚ್ಚಿನ ವಿವರಿಗಳಿಗೆ ಮಾಧ್ಯಮ ಪ್ರಕಟಣೆಯನ್ನು ವೀಕ್ಷಿಸಿ. pic.twitter.com/bz58gKS8pg
— ನಮ್ಮ ಮೆಟ್ರೋ (@OfficialBMRCL) June 20, 2026
ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಯೋಗ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಸುಲಭವಾಗಿ ಭಾಗವಹಿಸಲು ಅನುಕೂಲವಾಗುವಂತೆ ಮೆಟ್ರೋ ರೈಲು ಸೇವೆಯನ್ನು ಮುಂಜಾನೆ ಆರಂಭಿಸಲು ನಿರ್ಧರಿಸಿದೆ ಎಂದು ಬಿಎಂಆರ್‌ಸಿಎಲ್ (BMRCL) ಮಾಹಿತಿ ಹಂಚಿಕೊಂಡಿದೆ.
ಎಲ್ಲಾ ಮಾರ್ಗದ ಮೆಟ್ರೋಗಳು ನಾಳೆ ಬೆಳಿಗ್ಗೆ 5 ಗಂಟೆಯಿಂದಲೇ ಕಾರ್ಯಾರಂಭಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದು, ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
