ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ ಸಂಬಂಧಿಸಿದಂತೆ ಈಗಾಗಲೇ ನಮ್ಮ ಮೆಟ್ರೋ ದರ ಏರಿಕೆಗಾಗಿ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ. ಅನುಮತಿ ಬಂದ ಬಳಿಕ ನಿರ್ಧರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಮೆಟ್ರೋ ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಕೇಂದ್ರದಿಂದ ಉತ್ತರ ಬರಬೇಕು, ಉತ್ತರ ಬಂದ್ಮೇಲೆ ನಾವು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: Delhi Exit Poll| ದೆಹಲಿಯಲ್ಲಿ ಬಿಜೆಪಿ 50+ ಸ್ಥಾನ ಗೆಲ್ಲಲಿದೆ – ಟುಡೇಸ್ ಚಾಣಕ್ಯ
ಇನ್ನೂ ಇದೇ ವೇಳೆ ಕಾವೇರಿ ನೀರಿನ ದರ ಏರಿಕೆ ವಿಚಾರವಾಗಿ ಮಾತನಾಡಿ, ಸರ್ಕಾರಕ್ಕೆ ಬೆಲೆ ಏರಿಕೆಯ ಪ್ರಸ್ತಾವನೆಯನ್ನು ಜಲಮಂಡಳಿಯವರು ಸಲ್ಲಿಸಿದ್ದಾರೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಬೆಲೆ ಏರಿಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಬೆಂಗಳೂರಿನ ಹೆಬ್ಬಾಳದ ಬಳಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹಾಗೆಯೇ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದೆ. ಈ ವೇಳೆ ಬಿಡಿಎ ಅಧ್ಯಕ್ಷರಾದ ಶ್ರೀ @Mlanaharis ಅವರು ಉಪಸ್ಥಿತರಿದ್ದರು. pic.twitter.com/Q7RWpmlWZb
— DK Shivakumar (@DKShivakumar) February 6, 2025
ಇದೇ ವೇಳೆ ಹೆಬ್ಬಾಳ ಮೇಲ್ಸತುವೆ ಕಾಮಗಾರಿ ವೀಕ್ಷಿಸಿ ಮಾತನಾಡಿ, ಹೆಬ್ಬಾಳದ ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ ಬಿಡಿಎ ನಿರ್ಮಾಣ ಮಾಡುತ್ತಿರುವ ಲೂಪ್ ಪ್ಲೈಓವರ್ ಕಾಮಗಾರಿಯನ್ನು ಏಪ್ರಿಲ್ ವೇಳೆಗೆ ಮುಗಿಸುವಂತೆ ಸೂಚನೆ ನೀಡಿದರು. ಬೆಳಿಗ್ಗೆ 12ರ ಸುಮಾರಿಗೆ ಹೆಬ್ಬಾಳಕ್ಕೆ ಆಗಮಿಸಿದ ಅವರು, ಕಾಮಗಾರಿಯ ಪ್ರಗತಿಯ ಪರಿಶೀಲನೆ ನಡೆಸಿದ್ದು, ಇಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಟ್ರಾಪಿಕ್ ಕಿರಿಕಿರಿಯನ್ನು ಆದಷ್ಟು ಬೇಗ ನಿವಾರಿಸಲು ಸೂಚಿಸಿದ್ದಾರೆ.
ಬಿಡಿಎ ಆಯುಕ್ತರಿಗೆ ಏಪ್ರಿಲ್ ವೇಳೆಗೆ ಕಾಮಗಾರಿ ಸಂಪೂರ್ಣ ಮಾಡಿ, ಮೇಲ್ಸೇತುವೆಯನ್ನು ಲೋಕಾರ್ಪಣೆ ಮಾಡುವಂತೆ ಸೂಚಿಸಿದ್ದು, ಬಿಡಿಎ ಎಪ್ರಿಲ್ ಒಳಗೆ ಕಾಮಗಾರಿ ಮುಗಿಸುತ್ತದೆಯಾ ಎಂದು ಕಾದುನೋಡಬೇಕಿದೆ.ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಲಿಯಾದವರಿಗೆ ನ್ಯಾಯ ಕೊಡಿ: ಆರ್.ಅಶೋಕ್