ನವದೆಹಲಿ: ಕರ್ನಾಟಕದಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಮಾಲಿನ್ಯ ನಿಯಂತ್ರಣಕ್ಕಾಗಿ 1200 ಎಲೆಕ್ಟ್ರಿಕ್ ಬಸ್‍ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (Regional Rapid Transit System) ಕಾರಿಡಾರ್‌ನ ದೆಹಲಿ-ಗಾಜಿಯಾಬಾದ್ – ಮೀರತ್ ರೈಲುಗಳ ವಿಭಾಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ವೇಳೆ ಬೆಂಗಳೂರಿನಲ್ಲೂ (Bengaluru) ಎರಡು ಮೆಟ್ರೋ ಲೇನ್‍ಗಳನ್ನು ಉದ್ಘಾಟಿಸಲಾಗುತ್ತಿದೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
Advertisement
Advertisement
ಮೆಟ್ರೋದಲ್ಲಿ (Metro) ನಿತ್ಯ 80 ಲಕ್ಷಕ್ಕೂ ಅಧಿಕ ಜನರು ಪ್ರಯಾಣ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಂತೆ ಕರ್ನಾಟಕದಲ್ಲೂ ಮೆಟ್ರೋ ವಿಸ್ತರಣೆ ಮಾಡುತ್ತೇವೆ. ಬೆಂಗಳೂರಲ್ಲಿ ಮೆಟ್ರೋ ವಿಸ್ತರಣೆ ಮಾಡಲಾಗುತ್ತದೆ. ಅಲ್ಲದೇ ಮೈಸೂರಿನಲ್ಲೂ (Mysuru) ಮೆಟ್ರೋ ಸಾರಿಗೆ ಆರಂಭಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.
Advertisement
ನನ್ನ ಬಾಲ್ಯವನ್ನು ರೈಲ್ವೆ ಪ್ಲಾಟ್ ಫಾರಂನಲ್ಲೇ ಕಳೆದೆ, ಇಂದು ರೈಲ್ವೆ ವ್ಯವಸ್ಥೆಯಲ್ಲಿನ ಬದಲಾವಣೆ ಹೆಚ್ಚು ಖುಷಿ ಕೊಟ್ಟಿದೆ. ರೈಲ್ವೆಯಲ್ಲಿ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗಿದೆ. ಇದು ನಾರಿ ಶಕ್ತಿ ಅಭಿವೃದ್ಧಿಯ ಪ್ರತೀಕವಾಗಿದೆ. ನಮೋ ಭಾರತ್ ರೈಲಿನಲ್ಲಿ ಆಧುನಿಕತೆ, ವೇಗ ಮತ್ತು ಅತ್ಯುತ್ತಮ ಸೌಲಭ್ಯಗಳಿದೆ. ಭಾರತದ ಹೊಸ ಸಂಕಲ್ಪವನ್ನು ಈ ರೈಲು ತೋರಿಸುತ್ತಿದೆ ಎಂದಿದ್ದಾರೆ.
Advertisement
ನಮೋ ಭಾರತ್ (Namo Bharat) ರೈಲು ಭಾರತದಲ್ಲೇ ತಯಾರಾಗಿದೆ. ಇದು ವಿಮಾನಕ್ಕಿಂತ ಕಡಿಮೆ ಸದ್ದು ಮಾಡುವ ರೈಲಾಗಿದೆ. ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡಲಿದೆ. ಈ ರೈಲಿನ ವ್ಯವಸ್ಥೆಯಿಂದ ಭಾರತದ ಆರ್ಥಿಕತೆ ಹೆಚ್ಚಲಿದೆ. ಇಂದು ಉದ್ಘಾಟನೆಯಾಗಿರುವ ಯೋಜನೆ ಒಂದು ಆರಂಭವಾಗಿದೆ ಅಷ್ಟೇ. ಇದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲೂ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದರು.
ಭಾರತೀಯ ರೈಲ್ವೆಯ ಕಾಯಕಲ್ಪ ಮಾಡಲಾಗುತ್ತಿದೆ. ರೈಲ್ವೆ ಸಂಪರ್ಕ ವಿಸ್ತರಣೆಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ನನಗೆ ಸಣ್ಣ ಕನಸು ಕಾಣುವ ಹವ್ಯಾಸ ಇಲ್ಲ, ಕುಂಟುತ್ತಾ ನಡೆಯುವ ರೂಢಿಯೂ ಇಲ್ಲ. ನಾವು ಯಾವ ದೇಶಕ್ಕಿಂತ ಹಿಂದೆ ಉಳಿಯುವುದಿಲ್ಲ, ಭಾರತೀಯ ರೈಲ್ವೆ 100% ವಿದ್ಯುಧೀಕರಣ ದೂರ ಇಲ್ಲ ಎಂದಿದ್ದಾರೆ.
ಈ ಯೋಜನೆಯಲ್ಲಿ ಮಲ್ಟಿ ಮಾಡೇಲ್ ಕನೆಕ್ಟಿವಿಟ್ ಬಗ್ಗೆಯೂ ಗಮನಹರಿಸಲಾಗಿದೆ. ಎಲೆಕ್ಟ್ರಿಕ್ ಬಸ್‍ಗಳ ನೆಟ್‍ವರ್ಕ್ ಮಾಡಲಾಗುತ್ತಿದೆ. ರಾಜ್ಯಗಳಿಗೆ 10,000 ಬಸ್ ಕೊಡಲಾಗುತ್ತಿದೆ. ದೆಹಲಿಗೆ 1300ಕ್ಕೂ ಹೆಚ್ಚು ಬಸ್ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
Web Stories