ಬೆಂಗಳೂರು: ಬುಧವಾರ ಮೆಟ್ರೋ ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದ್ದರಿಂದ ಕಾಯಿನ್ ಬದಲು ಕಾಗದದ ಟಿಕೆಟ್ ವಿತರಿಸಲಾಗಿದೆ.
ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ವಿಧಾನಸೌಧ ಮುಂದಿನ ರಸ್ತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿತ್ತು. ಕಾರ್ಯಕ್ರಮ ವೀಕ್ಷಿಸಲು ಆಗಮಿಸಿದ್ದ ಜನ ಮೆಟ್ರೋ ರೈಲು ಪ್ರಯಾಣಕ್ಕೆ ಮುಗಿಬಿದ್ದಿದ್ದರು.
Advertisement
ದಿಢೀರ್ ಪ್ರಯಾಣಿಕರ ಸಂಖ್ಯೆ ದ್ವಿಗುಣಗೊಂಡಿದ್ದರಿಂದ ಕಾಯಿನ್ ಕೊರತೆ ಎದುರಿಸುತ್ತಿದ್ದ ಸಿಬ್ಬಂದಿ ಕಾಗದದ ಟಿಕೆಟ್‍ಗೆ ಮೊರೆ ಹೋಗಿದ್ದರು.
Advertisement
ಸಾಮಾನ್ಯವಾಗಿ ಸಂಜೆ 4ರಿಂದ 6 ರವರೆಗೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುತ್ತದೆ. ಇದೇ ಸಮಯದಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಧಾನ ಸೌಧಕ್ಕೆ ಬರಲು ರಸ್ತೆ ಸಂಚಾರ ಮಾರ್ಗ ಬದಲಾಗಿದ್ದು, ಅನಿವಾರ್ಯವಾಗಿ ಮೆಟ್ರೋ ಪ್ರಯಾಣಕ್ಕೆ ಜನರು ಮುಂದಾಗಿದ್ದರು. ಹೀಗಾಗಿ ಎಂ.ಜಿ.ರಸ್ತೆ, ವಿಧಾನಸೌಧ, ಕಬ್ಬನ್ ಪಾರ್ಕ್ ಸೇರಿದಂತೆ ಕೆಲವು ಮೆಟ್ರೊ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿತ್ತು.