ಚೆನ್ನೈ: ತಮಿಳುನಾಡಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೆಟ್ಟೂರು ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿರುವ ಹಿನ್ನೆಲೆ ಕೆಆರ್‍ಎಸ್ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ಕಬಿನಿ, ಕೆಆರ್ ಎಸ್ ಡ್ಯಾಂನಿಂದ ಭಾರೀ ಪ್ರಮಾಣದ ನೀರನ್ನು ಹೊರಕ್ಕೆ ಬಿಡಲಾಗ್ತಿದೆ. ಇದ್ರಿಂದ ತಮಿಳುನಾಡಿನ ಮೆಟ್ಟೂರು ಜಲಾಶಯದತ್ತ ಅಪಾರ ಪ್ರಮಾಣ ನೀರು ಹರಿಯುತ್ತಿದೆ.
Advertisement
ಸೋಮವಾರ ಬೆಳಗ್ಗೆ 87.92 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಸದ್ಯ ಮೆಟ್ಟೂರು ಡ್ಯಾಂ ನಲ್ಲಿ 1.25 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಓ ಹಿನ್ನೆಲೆಯಲ್ಲಿ ಇನ್ನೆರಡು ದಿನಗಳಲ್ಲಿ ಡ್ಯಾಂ ನ ನೀರಿನ ಮಟ್ಟ 100 ಅಡಿ ತಲುಪುವ ಸಾಧ್ಯತೆಗಳು ಹೆಚ್ಚಿವೆ.
Advertisement
Advertisement
ಹೊಗೇನಕಲ್ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ನದಿ ಪಾತ್ರದ ಪ್ರದೇಶಗಳಿಗೆ ನೀರು ನುಗ್ಗಿದೆ. ಮನೆಗಳು, ದೇಗುಲಗಳಲ್ಲಿ ನೀರು ನಿಂತಿದ್ದು, ಜನ ಆತಂಕದಲ್ಲಿದ್ದಾರೆ. ಹೊಗೇನಕಲ್ ಫಾಲ್ಸ್ ಗೆ ಯಾರು ಹೋಗಬಾರದು ಅಂತಾ ತಮಿಳುನಾಡು ನಿಷೇಧ ಹೇರಿದೆ. ಈಗಾಗಲೇ 88 ಅಡಿಯಷ್ಟು ತಲುಪಿರುವ ಮೆಟ್ಟೂರು ಡ್ಯಾಂನ ನೀರಿನ ಮಟ್ಟ ಕೆಲವೇ ದಿನಗಳಲ್ಲಿ 100 ಅಡಿಯಷ್ಟು ತಲುಪಲಿದೆ. ಈ ಜಲಾಶಯದಲ್ಲಿ 120 ಅಡಿ ನೀರಿನ ಗರಿಷ್ಠ ಮಟ್ಟವನ್ನು ಹೊಂದಿದೆ.
Advertisement
ಒಟ್ಟಿನಲ್ಲಿ ಮೆಟ್ಟೂರು ಜಲಾಶಯದಲ್ಲಿ ಜಲತಾಂಡವೇ ಸೃಷ್ಟಿಯಾಗಿದೆ. ಇನ್ನು ನದಿ ಪಾತ್ರದ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ.