ನವದೆಹಲಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ (CAPF) ಪರೀಕ್ಷೆಯನ್ನು ಇದೇ ಮೊದಲ ಬಾರಿಗೆ ಕನ್ನಡ (Kannada) ಸೇರಿದಂತೆ 13 ಸ್ಥಳೀಯ ಭಾಷೆಯಲ್ಲಿ ಆಯೋಜಿಸಲು ಕೇಂದ್ರ ಸರ್ಕಾರ (Union Government) ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಸರ್ಕಾರ ನಿರ್ಧಾರಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಷಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement
ಅಸ್ಸಾಂ, ಬೆಂಗಾಳಿ, ಗುಜರಾತಿ, ಮರಾಠಿ, ಮಲೆಯಾಳಂ, ಕನ್ನಡ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಯಯಲ್ಲಿ ಇನ್ನು ಮುಂದೆ ಪರೀಕ್ಷೆ ಬರೆಯಬಹುದು.
Advertisement
ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ.
— Pralhad Joshi (@JoshiPralhad) April 15, 2023
Advertisement
ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಆಯೋಜನೆ ಮಾಡಿದ್ದಕ್ಕೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ 13 ಸ್ಥಳೀಯ ಭಾಷೆಯಲ್ಲಿ ಪರೀಕ್ಷೆ ಆಯೋಜನೆ ಮಾಡಲು ಮುಂದಾಗಿದೆ. ಇದನ್ನೂ ಓದಿ: ನಟ ಚೇತನ್ ಭಾರತದ ವೀಸಾ ರದ್ದು
Advertisement
ಟ್ವೀಟ್‌ನಲ್ಲಿ ಏನಿದೆ?
ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಆಯೋಜಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಕೈಗೊಂಡಿದೆ.
A pathbreaking decision, which will give wings to the aspirations of our youth! This is a part of our various efforts to ensure language is not seen as a barrier in fulfilling one’s dreams. https://t.co/rixlkUgMY7
— Narendra Modi (@narendramodi) April 15, 2023
ಸ್ವತಂತ್ರ ಭಾರತದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸರ್ಕಾರವೊಂದು ಇಂತಹ ನಿರ್ಣಯ ಕೈಗೊಂಡು ಸ್ಥಳೀಯ ಭಾಷೆಗಳಿಗೆ ಗೌರವ ನೀಡುವ ಹಾಗೂ ಅಭಿವೃದ್ಧಿಗೆ ಪೂರಕವಾದ ಕಾರ್ಯವನ್ನು ಮಾಡಿದೆ. ಈ ನಿರ್ಣಯದಿಂದ ರಾಜ್ಯದ ಹೆಚ್ಚು ಅಭ್ಯರ್ಥಿಗಳಿಗೆ ಈ ಸೇವೆಗೆ ಸೇರುವ ಅವಕಾಶ ದೊರೆಯಲಿದೆ.
ಈ ಐತಿಹಾಸಿಕ ಹಾಗೂ ಕ್ರಾಂತಿಕಾರಿ ನಿರ್ಧಾರ ತೆಗೆದುಕೊಂಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ಗೃಹ ಸಚಿವ ಶ್ರೀ ಅಮಿತ್ ಶಾ ಅವರನ್ನು ನಾನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ.