ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

Public TV
2 Min Read
mi 17v5

ನವದೆಹಲಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ (ಕೂನೂರು ಬಳಿ) ಪತನಗೊಂಡಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಆದರೆ ಸುರಕ್ಷತೆ, ಸಾಮರ್ಥ್ಯದಲ್ಲಿ ಎಂಐ-17ವಿ5 ಹೆಲಿಕಾಪ್ಟರ್ ಬಹಳ ಹೆಸರುವಾಸಿ ಎಂಬ ವಿಚಾರ ಈಗ ಲಭ್ಯವಾಗಿದೆ.

mi 17v5..

ಎಂಐ-17ವಿ5 ವಿಶೇಷತೆ ಏನು?
ಭಾರತೀಯ ವಾಯುಪಡೆ ಹೆಚ್ಚಾಗಿ ಬಳಸುವ ಎಂಐ-17ವಿ5 ಆಧುನಿಕ ಸಾರಿಗೆ ಹೆಲಿಕಾಪ್ಟರ್ ಆಗಿದೆ. ಪ್ರಯಾಣಿಕರು, ಸರಕು ಹಾಗೂ ವಸ್ತುಗಳನ್ನು ಸಾಗಿಸಲು ಪೂರಕವಾಗಿ ಈ ಹೆಲಿಕಾಪ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಯುದ್ಧತಂತ್ರದ ವಾಯುಪಡೆ ಹಾಗೂ ಸೈನಿಕರ ತಂಡಗಳನ್ನು ಸಾಗಿಸಿ ಯಾವುದೇ ಸ್ಥಳದಲ್ಲೂ ಅವರನ್ನು ಇಳಿಸುವ ಸಾಮರ್ಥ್ಯವನ್ನು ಈ ಹೆಲಿಕಾಪ್ಟರ್ ಹೊಂದಿದೆ. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

ಆಧುನಿಕ ಏವಿಯಾನಿಕ್ಸ್ ನೊಂದಿಗೆ ಸಜ್ಜುಗೊಂಡಿರುವ ಎಂಐ-17ವಿ5 ಹೆಲಿಕಾಪ್ಟರ್ ಯಾವುದೇ ಭೌಗೋಳಿಕ ಮತ್ತು ಹವಾಮಾನ ಪರಿಸ್ಥಿತಿ, ಹಗಲು-ರಾತ್ರಿ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ.

BIPIN RAWATH

ಭಾರತೀಯ ವಾಯುಪಡೆಯು ಹೆಲಿಕಾಪ್ಟರ್ ಅನ್ನು ಸರಕು ಸಾಗಿಸಲು ಮಾತ್ರವಲ್ಲದೇ ರಕ್ಷಣಾ ಕಾರ್ಯ ಹಾಗೂ ಕಾರ್ಯಾಚರಣೆ ಪ್ರದೇಶಗಳಲ್ಲಿ ಸೇನೆಯನ್ನು ನಿಯೋಜಿಸಲು ಸಹ ಇದನ್ನು ಬಳಸಿಕೊಳ್ಳಬಹುದು. ಇದನ್ನೂ ಓದಿ: 500 ಕೋಟಿ ಮೌಲ್ಯದ ಡ್ರಗ್ಸ್ ಪೊಲೀಸರ ವಶಕ್ಕೆ

ಸೋವಿಯತ್ ರಾಷ್ಟ್ರ ರಷ್ಯಾ ವಿನ್ಯಾಸಗೊಳಿಸಿರುವ ಹೆಲಿಕಾಪ್ಟರ್ ಇದಾಗಿದೆ. ಯಾವುದೇ ಹವಾಮಾನ ಪರಿಸ್ಥಿತಿಯಲ್ಲೂ ನಿಗದಿತವಲ್ಲದ ಪ್ರದೇಶಗಳಲ್ಲೂ ಲ್ಯಾಂಡಿಂಗ್ ಆಗುವ ಸಾಮರ್ಥ್ಯವನ್ನು ಹೊಂದಿದೆ. ಸುಮಾರು 1,300 ಕೆಜಿಯಷ್ಟು ತೂಕದ ವಸ್ತುಗಳನ್ನು ಹೊತ್ತು ಸಾಗಿಸಲು ಸಮರ್ಥವಾಗಿದೆ. ಅಲ್ಲದೇ ಗಂಟೆಗೆ ಸುಮಾರು 250 ಕಿ.ಮೀ.ನಷ್ಟು ವೇಗವಾಗಿ ಹಾರುವ ಸಾಮರ್ಥ್ಯವನ್ನು ಹೊಂದಿದೆ.

bipin rawat

ಕೆಲ ವರ್ಷಗಳ ಹಿಂದೆ ರಷ್ಯಾದಿಂದ 80 ಎಂಐ-17 ಹೆಲಿಕಾಪ್ಟರ್‍ಗಳನ್ನು ಭಾರತ ಖರೀದಿಸಿತ್ತು. ಇವು ಭಾರತೀಯ ವಾಯುಪಡೆಯ ಸಾರಿಗೆ ನೌಕಾಪಡೆಯ ಕಾರ್ಯಚಟುವಟಿಕೆಗಳಿಗೆ ಮೀಸಲಾಗಿವೆ.

ರಷ್ಯಾ ನಿರ್ಮಿತ ಹೆಲಿಕಾಪ್ಟರ್ ಎಂಐ-17ವಿ5 ಪ್ರಧಾನ ಮಂತ್ರಿ ಸೇರಿದಂತೆ ಎಲ್ಲಾ ಗೌರವಾನ್ವಿತರ ಪ್ರಯಾಣಕ್ಕೆ ಬಳಸುವ ವಿಶ್ವಾಸಾರ್ಹ ವಿಮಾನವಾಗಿದೆ. ಇದು ಸಮರ್ಥ ಹೆಲಿಕಾಪ್ಟರ್‍ಗಳ ಸರಣಿಯ ಅಗ್ರಸ್ಥಾನದಲ್ಲಿದೆ. ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತವು ಪಾಕಿಸ್ತಾನದ ಬಾಲ್‍ಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿದ ಮರುದಿನ ಅಂದರೆ 2019ರ ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಒಂದು ಅಪಘಾತ ಹೊರತುಪಡಿಸಿದರೆ, ಈ ಹೆಲಿಕಾಪ್ಟರ್‍ನಿಂದ ಈವರೆಗೂ ಯಾವುದೇ ದೊಡ್ಡ ಅಪಘಾತ ಸಂಭವಿಸಿಲ್ಲ.

Share This Article
Leave a Comment

Leave a Reply

Your email address will not be published. Required fields are marked *