ಮುಂಬೈ: ಹೇಲಿ ಮ್ಯಾಥ್ಯೂಸ್ (Hayley Matthews) ಆಲ್‌ರೌಂಡರ್ ಆಟದಿಂದಾಗಿ ಎಲಿಮಿನೆಟರ್ (Eliminator) ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧ 47 ರನ್‌ಗಳ ಭರ್ಜರಿ ಜಯ ಸಾಧಿಸಿದ ಮುಂಬೈ (Mumbai Indians) ಡಬ್ಲ್ಯೂಪಿಎಲ್ ಫೈನಲ್ ಪ್ರವೇಶಿಸಿದೆ.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ 4 ವಿಕೆಟ್ ನಷ್ಟಕ್ಕೆ 213 ರನ್ ಹೊಡೆಯಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಗುಜರಾತ್ 19.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯ್ತು.
Convincing all-round show 👌
A place in the #Final ✅
The Harmanpreet Kaur led-Mumbai Indians have plenty to celebrate tonight as they move one step closer to glory 🏆
Scorecard ▶ https://t.co/v62GxzKUW2 #TATAWPL | #MIvGG | #Eliminator | @mipaltan pic.twitter.com/SgXHbMVkPe
— Women’s Premier League (WPL) (@wplt20) March 13, 2025
ಈ ಗೆಲುವಿನೊಂದಿಗೆ ಮುಂಬೈ ಎರಡನೇ ಬಾರಿ ಫೈನಲ್ ಪ್ರವೇಶಿಸಿದಂತಾಯಿತು. 2023 ರಲ್ಲಿ ನಡೆದ ಮೊದಲ ಆವೃತ್ತಿ ಮುಂಬೈ ಡೆಲ್ಲಿಯನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಶನಿವಾರ ಫೈನಲ್‌ನಲ್ಲಿ ಅದೇ ಡೆಲ್ಲಿ ವಿರುದ್ಧ ಸೆಣಸಾಡಲಿದೆ.
ಗುಜರಾತ್ ಆರಂಭದಿಂದಲೇ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತ್ತು. 43 ರನ್‌ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿತ್ತು. ಹೇಲಿ ಮ್ಯಾಥ್ಯೂಸ್ 3 ವಿಕೆಟ್, ಅಮೆಲಿಯಾ ಕೆರ್ 2 ವಿಕೆಟ್ ಪಡೆದರು.
The captain says 🗣It’s my turn now 😎
Harmanpreet Kaur providing the final flourish 👌👌#MI have crossed the 200-run mark 👏👏
Updates ▶ https://t.co/v62GxzKUW2 #TATAWPL | #MIvGG | #Eliminator | @ImHarmanpreet pic.twitter.com/tkhlp817qA
— Women’s Premier League (WPL) (@wplt20) March 13, 2025
ಮುಂಬೈ ಪರ ಯಸ್ತಿಕಾ ಭಾಟಿಯಾ 15 ರನ್ ಗಳಿಸಿ ಔಟಾದರೂ ಎರಡನೇ ವಿಕೆಟಿಗೆ ಹೇಲಿ ಮ್ಯಾಥ್ಯೂಸ್ ಮತ್ತು ನ್ಯಾಟ್ ಸಿವರ್-ಬ್ರಂಟ್ 71 ಎಸೆತಗಳಲ್ಲಿ 133 ರನ್ ಜೊತೆಯಾಟವಾಡಿದರು.
ಹೇಲಿ ಮ್ಯಾಥ್ಯೂಸ್ 77 ರನ್(50 ಎಸೆತ, 10 ಬೌಂಡರಿ, 3 ಸಿಕ್ಸರ್) ಹೊಡೆದರೆ ನ್ಯಾಟ್ ಸಿವರ್-ಬ್ರಂಟ್ 77 ರನ್( 41 ಎಸೆತ, 10 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರು. ಕೊನೆಯಲ್ಲಿ ನಾಯಕಿ ಹರ್ಮನ್ ಪ್ರೀತ್ ಕೌರ್ (Harmanpreet Kaur) 36 ರನ್( 12 ಎಸೆತ, 2 ಬೌಂಡರಿ, 4 ಸಿಕ್ಸರ್) ಸಿಡಿಸಿದ ಪರಿಣಾಮ ಮುಂಬೈ ತಂಡ 200 ರನ್‌ಗಳ ಗಡಿಯನ್ನು ದಾಟಿತ್ತು.
MAXIMUMS ❎ 2️⃣
If the first one was BIG 😮
The second one was even BIGGER 😱
Nat Sciver-Brunt enjoying herself in the middle 💙
Updates ▶ https://t.co/v62GxzKUW2 #TATAWPL | #MIvGG | #Eliminator pic.twitter.com/EmtgsBHJgG
— Women’s Premier League (WPL) (@wplt20) March 13, 2025