ಹಾವೇರಿ: ಪಿಪಿಇ ಕಿಟ್ (PPE Kit) ಖರೀದಿ ಕುರಿತು ತನಿಖೆ ಮಾಡುತ್ತಿರುವ ನ್ಯಾ.ಮೈಕೆಲ್ ಡಿ ಕುನ್ಹಾ (John Michael D’Cunha) ಅವರೇ ನೀವು ನ್ಯಾಯಮೂರ್ತಿ, ಏಜೆಂಟರಲ್ಲಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಆರೋಪಿಸಿದ್ದಾರೆ.
ಶಿಗ್ಗಾಂವಿಯಲ್ಲಿ (Shiggaon) ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ (Bharath Bommai) ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಯಾವಾಗಲೂ ನಮ್ಮ ವಿರುದ್ಧ ಇದ್ದವರು, ಈಗ ಚುನಾವಣೆ ನಡೆದ ಸಂದರ್ಭದಲ್ಲಿ ಯಾಕೆ ಮಧ್ಯಂತರ ವರದಿ ಕೊಡಬೇಕಿತ್ತು. ಒಂದೂವರೆ ವರ್ಷದಿಂದ ಈ ಸರ್ಕಾರ ಏನು ಮಾಡುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ಜನರ ಮನಸನ್ನು ಬೇರೆ ಕಡೆ ತಿರುಗಿಸಲು ನಾಟಕ ಹೂಡಿದ್ದಾರೆ. ಇದರಲ್ಲಿ ಯಾವುದೇ ಧಮ್ಮಿಲ್ಲ, ಸಿದ್ದರಾಮಣ್ಣ ನೀವು ವಾಲ್ಮೀಕಿ ಹಗರಣದಲ್ಲಿ 190 ಕೋಟಿ ನುಂಗಿಲ್ಲ 90 ಕೋಟಿ ನುಂಗಿದ್ದೇನೆ ಅಂತ ಹೇಳಿದ್ದೀರಿ. ಸಗಣಿ ಎಷ್ಟು ತಿಂದರೂ ಸಗಣಿಯೇ, ನಿಮ್ಮ ಮೇಲಿನ ಆರೊಪ ಮರೆಮಾಚಲು ಈ ರೀತಿಯ ಧಮ್ಕಿ ನಡೆಯುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮೆಕ್ಕೆಜೋಳ ರಾಶಿ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿ – ಕಾರ್ಮಿಕ ಸ್ಥಳದಲ್ಲೇ ಸಾವು
ನಮ್ಮ ನಾಯಕ ಯಡಿಯೂರಪ್ಪನವರ ಬಗ್ಗೆ ಕುನ್ಹಾ ಕಮಿಷನ್ ರಚನೆ ಮಾಡಿದ್ದಾರೆ. ಕುನ್ಹಾ ಕಮಿಷನ್‌ನವರು ಯಡಿಯೂರಪ್ಪ ಹಾಗೂ ರಾಮುಲು ಅವರಿಗೆ ನೊಟಿಸ್ ನೀಡದೇ ತಾತ್ಕಾಲಿಕ ವರದಿ ನೀಡಿದ್ದಾರೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ನೀವು ತಪ್ಪಿತಸ್ಥರು ಎಂದು ಹೈಕೋರ್ಟ್ ಹೇಳಿದೆ. ಯಡಿಯೂರಪ್ಪ ಅವರಿಗೆ ಯಾವುದೆ ಕೋರ್ಟ್ ರಾಜಿನಾಮೆ ಕೊಡುವಂತೆ ಹೇಳಿರಲಿಲ್ಲ. ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಮಹಿಳೆಯರಿಗೆ 3,000 ರೂ., ನಿರುದ್ಯೋಗ ಯುವಕ, ಯುವತಿಯರಿಗೆ 4,000 ರೂ. ಭತ್ಯೆ; ಕಾಂಗ್ರೆಸ್ ʻಮಹಾʼ ಗ್ಯಾರಂಟಿ!
ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿಯುವರು ಒಂದೂ ಮನೆ ಕೊಟ್ಟಿಲ್ಲ ಅಂತ ಕೇಳುತ್ತೀರಿ. ಶಿಗ್ಗಾಂವಿ ಸವಣೂರಿನಲ್ಲಿ ಊರಿಗೂರೆ ಹೊಸ ಮನೆ ಕಟ್ಟಿಸಿದ್ದೇವೆ. ನೀವು ಒಂದಾದರೂ ಮನೆ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನಮ್ಮಪ್ಪನ ಆಣೆ ಸಿದ್ದರಾಮಯ್ಯ ಡಿಸೆಂಬರ್‌ವರೆಗೆ ಮಾತ್ರ ಸಿಎಂ ಆಗಿರ್ತಾರೆ: ಸೋಮಣ್ಣ ಭವಿಷ್ಯ
ಈ ಸರ್ಕಾರ ಹಾಲಿನ ದರ, ಆಲ್ಕೊಹಾಲಿನ ದರ ಹೆಚ್ಚಳ ಮಾಡಿದ್ದಾರೆ. ವಕ್ಪ್ ನೋಟಿಸ್ ವಾಪಸ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ವಕ್ಫ್ಗೆ ಯಾವುದೇ ಆಸ್ತಿ ಆಗಬೇಕೆಂದರೆ ಅದು ದಾನವಾಗಿರಬೆಕು. ಇಲ್ಲ ಸರ್ಕಾರದಿಂದ ಬಂದಿರಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿದೆ. ಆದರೆ ನೀವು ರೈತರ ಜಮಿನಿಗೂ ವಕ್ಫ್ ಎಂದು ನೋಟಿಸ್ ಕೊಡುತ್ತಿದ್ದೀರಿ. ಕೋರ್ಟ್ ಆದೇಶದ ಬಗ್ಗೆ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನರೇಂದ್ರ ಮೋದಿ ಸುಳ್ಳಿನ ಸರದಾರ – ಮಲ್ಲಿಕಾರ್ಜುನ ಖರ್ಗೆ ತೀವ್ರ ತರಾಟೆ
ಶಿಗ್ಗಾಂವಿ ಸಂತೆ ಮೈದಾನದಲ್ಲಿ ಮುಸ್ಲಿಂ ಧ್ವಜ ಬಂದಿದೆ. ಇದುವರೆಗೂ ಈ ಧ್ವಜ ಇರಲಿಲ್ಲ. ಈ ಕ್ಷೇತ್ರದಲ್ಲಿ ಹೇಳೋರು ಕೇಳೋರು ಇಲ್ವಾ, ನಾವೂ ಸಂತೆ ಮೈದಾನದಲ್ಲಿ ಭಗವಾಧ್ವಜ ಹಾರಿಸುತ್ತೇವೆ. ಇದೆಲ್ಲ ನಿಲ್ಲಬೇಕೆಂದರೆ ಭರತ್ ಬೊಮ್ಮಾಯಿಯನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದರು. ಇದನ್ನೂ ಓದಿ: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ
ಇದುವರೆಗೂ ಯಾವ ಯಾವ ಭೂಮಿಯನ್ನು ವಕ್ಪ್ ಹೆಸರಿನಲ್ಲಿ ಸೇಲ್ ಡೀಡ್, ದಾನ ಪತ್ರ ನೀಡಿರುವುದನ್ನು ಎಲ್ಲವನ್ನು ತನಿಖೆ ಮಾಡಬೇಕು. ನಿಮ್ಮ ಒಂದಿಂಚೂ ಜಾಗ ಹೋಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಭಾರತೀಯ ಜನತಾ ಪಾರ್ಟಿ ಅಲ್ಲಾ, ಭಾರತೀಯ ಜೂಟಾ ಪಾರ್ಟಿ: ಸಚಿವ ಖಂಡ್ರೆ