ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ತಾಯಿ ಆತ್ಮಹತ್ಯೆ ಬೆನ್ನಲ್ಲೇ ಮಗನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ (Malavalli) ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ರಂಜಿತ್ (31) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: Budget 2025: ಒಂದು ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ?
Advertisement
Advertisement
ಮೈಕ್ರೋ ಫೈನಾನ್ಸ್ನವರು ಮನೆಯನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದು ನಾಲ್ಕು ದಿನದ ಹಿಂದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಪ್ರೇಮ ಆತ್ಮಹತ್ಯೆ ಮಾಡಿಕೊಂಡಿದ್ದರು. ತಾಯಿಯ ಸಾವಿನಿಂದಾಗಿ ಮನನೊಂದು ಅನಾರೋಗ್ಯಕ್ಕೆ ತುತ್ತಾಗಿ ಅಂಗವೈಕಲ್ಯದಿಂದ ಬಳಲುತ್ತಿದ್ದರು. ಮುಂದೆ ಜೀವನ ಹೇಗೆ ಎಂದು ತಿಳಿಯದೇ ಹಲಗೂರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
ಇಂದು ಹಲಗೂರು ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ತಾಯಿ ಸಾವನ್ನಪ್ಪಿದ್ದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರೇಮ ಹಾಗೂ ರಂಜಿತ್ ಆತ್ಮಹತ್ಯೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: Budget 2025: ಎನ್‌ಡಿಎ ದೋಸ್ತಿ ಬಿಹಾರ್‌ಗೆ ಬಂಪರ್ – ಬಜೆಟ್‌ನಲ್ಲಿ ಭರಪೂರ ಕೊಡುಗೆ