ಬೆಂಗಳೂರು: ಕನಿಷ್ಠ ವೇತನ, ಪಿಎಫ್, ಇಎಸ್‍ಐ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
Advertisement
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಕಾರ್ಯಕರ್ತೆಯರು ಕೊರೆಯುವ ಚಳಿಯಲ್ಲಿ 2ನೇ ದಿನವೂ ಅಹೋರಾತ್ರಿ ಧರಣಿ ಮುಂದುವರಿಸಿದ್ರು. ಇಂದು ರಾಜ್ಯಾದ್ಯಂತ ಶಾಲೆಗಳಲ್ಲಿ ಬಿಸಿಯೂಟ ಬಂದ್ ಆಗಲಿದ್ದು, ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ.
Advertisement
Advertisement
ಮೊದಲಿಗೆ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ಜಾಥಾ ನಡೆಸಲಿರುವ ಕಾರ್ಯಕರ್ತೆಯರು, ಸಿಐಟಿಯು ಸಂಘಟನೆಯ ಅಧ್ಯಕ್ಷೆ ವರಲಕ್ಷ್ಮಿ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
Advertisement
ಇಷ್ಟೆಲ್ಲಾ ಆಗ್ತಿದ್ರು ರಾಜ್ಯ ಸರ್ಕಾರ ಮಾತ್ರ ತನ್ನ ಜಾಣಕುರುಡುತನವನ್ನು ಮುಂದುವರಿಸಿದೆ. ಈ ಮಧ್ಯೆ ಧರಣಿನಿರತ ಕಾರ್ಯಕರ್ತೆಯರಿಗೆ ಮಹಿಳಾ ಎಂಪವರ್‍ಮೆಂಟ್ ಪಕ್ಷ ಬೆಂಬಲ ಸೂಚಿಸಿದ್ದು, ರಾತ್ರಿ ಮಹಿಳೆಯರಿಗೆ ಹೊದಿಕೆಗಳನ್ನ ನೀಡಿದ್ರು.