ಬೆಂಗಳೂರು: ಕನಿಷ್ಟ ವೇತನ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ 4ನೇ ದಿನಕ್ಕೆ ಕಾಲಿಟ್ಟಿದೆ. ಇದನ್ನೂ ಓದಿ: ಹೆಣ್ಮಕ್ಕಳ ವಿಷಯ ಬಂದ್ರೆ ನಾನು ಜೈಲಿಗೆ ಹೋಗಲು ಸಿದ್ಧ: ಬಿಸಿಯೂಟ ಕಾರ್ಯಕರ್ತೆಯರ ಬೆಂಬಲಕ್ಕೆ ನಿಂತ ಹುಚ್ಚ ವೆಂಕಟ್
Advertisement
ಇಂದು ರಾಜ್ಯ ವಿವಿಧ ಭಾಗಗಳಿಂದ ಮತ್ತಷ್ಟು ಕಾರ್ಯಕರ್ತೆಯರು ಆಗಮಿಸಲಿದ್ದು, ಪ್ರತಿಭಟನೆ ಕಾವು ಮತ್ತಷ್ಟು ಹೆಚ್ಚಲಿದೆ. ಗುರುವಾರ ರಾತ್ರಿ ಶಾಸಕ ಕೋನರೆಡ್ಡಿ ಪ್ರತಿಭಟನಾಕಾರರನ್ನು ಭೇಟಿ ಮಾಡಿದ್ರು. ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳ ಕುರಿತು ಖುದ್ದು ಅವರಿಂದಲೇ ಮಾಹಿತಿ ಪಡೆದ್ರು. ಇದನ್ನೂ ಓದಿ: 3ನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ- ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ
Advertisement
Advertisement
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ. ಇಂದು ಅಧಿವೇಶದನಲ್ಲಿ ಖುದ್ದು ನಾನೇ ಈ ಕುರಿತು ಪ್ರಸ್ತಾಪ ಮಾಡುತ್ತೇನೆ ಅಂದ್ರು. ಇದನ್ನೂ ಓದಿ: ಸಾವಿರಾರು ಬಿಸಿಯೂಟ ಸಿಬ್ಬಂದಿಗಳಿಂದ ಪ್ರತಿಭಟನೆ- ಸಚಿವ ತನ್ವೀರ್ ಸೇಠ್ ಮನೆ ಮುತ್ತಿಗೆಗೆ ಪೊಲೀಸರ ತಡೆ