ಕನ್ನಡದ ‘ಬಿಗ್ ಬಾಸ್ ಸೀಸನ್ 11’ರ (Bigg Boss Kannada 11) ಆಟ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದು 90ನೇ ದಿನದತ್ತ ಮುನ್ನುಗ್ಗುತ್ತಿದೆ. ಹೀಗಿರುವಾಗ ಈ ವಾರ ಬಿಗ್ ಬಾಸ್ ಸ್ಪರ್ಧಿಗಳಿಗೆ ಮಿಡ್ ವೀಕ್ ಎಲಿಮಿನೇಷನ್ ಪ್ರಕ್ರಿಯೆ ಶಾಕ್ ಕೊಟ್ಟಿದೆ ಎನ್ನಲಾಗ್ತಿದೆ. ದೊಡ್ಮನೆಯಿಂದ ಸ್ಟ್ರಾಂಗ್ ಸ್ಪರ್ಧಿಯೇ ಹೊರ ನಡೆದಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Advertisement
ಬಿಗ್ ಬಾಸ್ ಮನೆಯಲ್ಲಿ ಪ್ರಸ್ತುತ 10 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಉಗ್ರಂ ಮಂಜು, ರಜತ್, ತ್ರಿವಿಕ್ರಮ್, ಹನುಮಂತ, ಧನರಾಜ್, ಭವ್ಯಾ, ಮೋಕ್ಷಿತಾ, ಗೌತಮಿ, ಐಶ್ವರ್ಯಾ, ಚೈತ್ರಾ ಈ ಸ್ಪರ್ಧಿಗಳ ನಡುವೆ ಅಳಿವು ಮತ್ತು ಉಳಿವಿಗಾಗಿ ಜಟಾಪಟಿ ನಡೆಯುತ್ತಿದೆ. ಹೀಗಿರುವಾಗ ಇವರ ಪೈಕಿ ಒಬ್ಬರು ಮನೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಚರ್ಚೆ ಶುರುವಾಗಿದೆ.
Advertisement
Advertisement
ಮಿಡ್ ವೀಕ್ ಎಲಿಮಿನೇಷನ್ ಬಗ್ಗೆ ಪರ ಮತ್ತು ವಿರೋಧದ ಚರ್ಚೆ ಶುರುವಾಗಿದ್ದು, ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ (Chaithra) ಮನೆಯಿಂದ ಎಲಿಮಿನೇಟ್ ಆಗಿದ್ದಾರೆ ಎನ್ನಲಾದ ಸುದ್ದಿ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಬಿಗ್ ಬಾಸ್ ಸಂಚಿಕೆಯ ಮೂಲಕವೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.
Advertisement
ಕಳೆದ ಬಾರಿ ಶಿಶಿರ್ ಎಲಿಮಿನೇಷನ್ ಬಳಿಕ ಗೋಲ್ಡ್ ಸುರೇಶ್ ಅವರು ಕುಟುಂಬದ ತುರ್ತು ಪರಿಸ್ಥಿತಿ ಹಿನ್ನೆಲೆ ಶೋನಿಂದ ನಿರ್ಗಮಿಸಿದ್ದರು. ಹಾಗಾಗಿ ಕಳೆದ ವಾರಾಂತ್ಯ ತ್ರಿವಿಕ್ರಮ್ ಅವರ ಫೇಕ್ ಎಲಿಮಿನೇಷನ್ ನಡೆದಿತ್ತು. ಫಿನಾಲೆಗೆ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆ ಈಗ ಮಿಡ್ ವೀಕ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ ಎನ್ನಲಾಗಿದೆ.