ನವದೆಹಲಿ: 2025 ರ ಕೇಂದ್ರ ಬಜೆಟ್‌ನಲ್ಲಿ ತೆರಿಗೆ ಕಡಿತವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ (PM Modi) ಹೃದಯದಲ್ಲಿದೆ ಎಂದು ಬಣ್ಣಿಸಿದ್ದಾರೆ.
12 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಅಮಿತ್ ಶಾ ಅವರು, ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುನ್ನಡೆದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ
Advertisement
Advertisement
ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
Advertisement
Advertisement
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಕೇಂದ್ರ ಬಜೆಟ್ 2025 ಅನ್ನು ಮಂಡಿಸುತ್ತಾ, ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ 12 ಲಕ್ಷ ರೂ.ಗಳವರೆಗೆ – ಅಂದರೆ ಪ್ರಮಾಣಿತ ಕಡಿತಗಳನ್ನು ಒಳಗೊಂಡಂತೆ 12.75 ಲಕ್ಷ ರೂ.ಗಳವರೆಗೆ ಯಾವುದೇ ಆದಾಯ ತೆರಿಗೆಯನ್ನು ಪಾವತಿಸಲಾಗುವುದಿಲ್ಲ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: Union Budget 2025 | ಯಾವ ವರ್ಷ ಎಷ್ಟು ಲಕ್ಷ ತೆರಿಗೆ ವಿನಾಯಿತಿ ಸಿಕ್ಕಿತ್ತು? – ಇಲ್ಲಿದೆ ಪೂರ್ಣ ವಿವರ