ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ (Gyanendra Kumar) ಬಂಧನದ ಬೆನ್ನಲ್ಲೇ ಇದೀಗ ಸಿಐಡಿ ತಂಡ ಮತ್ತೊಂದು ಬೇಟೆಯಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯೊಬ್ಬನನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಪ್ರಕರಣದಲ್ಲಿ ಗ್ಯಾನೇಂದ್ರ ಕುಮಾರ್ ಅವರಿಗೆ ಸಹಾಯ ಮಾಡಿದ್ದ ಹಿನ್ನೆಲೆ ಮಧ್ಯವರ್ತಿಯನ್ನ ವಶಕ್ಕೆ ಪಡೆಯಲಾಗಿದೆ ಎಂದು ಸಿಐಡಿ (CID) ಮೂಲಗಳು ತಿಳಿಸಿವೆ.

ಇನ್ನೂ ಕಳೆದ ರಾತ್ರಿಯಷ್ಟೇ ಕೆಪಿಎಸ್‌ಸಿ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಬಂಧಿಸಲಾಗಿತ್ತು. ವಿಚಾರಣೆಗೆ ಅಸಹಕಾರ ತೋರಿದ ಹಿನ್ನೆಲೆ ಗ್ಯಾನೇಂದ್ರ ಅವರನ್ನ ಸಿಐಡಿ ಅರೆಸ್ಟ್ ಮಾಡಿತ್ತು. ಈ ಸುದ್ದಿಯನ್ನ ನಿಮ್ಮ ʻಪಬ್ಲಿಕ್ ಟಿವಿʼ ಬ್ರೇಕ್ ಮಾಡಿತ್ತು. ಈ ಬೆನ್ನಲ್ಲೇ ಕಾರ್ಯಾಚರಣೆ ತೀವ್ರಗೊಳಿಸಿದ ಸಿಐಡಿ ತಂಡ ಮಧ್ಯವರ್ತಿಯೊಬ್ಬನನ್ನ ಬಂಧಿಸಿದೆ.
ಇದಕ್ಕೂ ಮುನ್ನ 11 ಗಂಟೆಗಳ ಕಾಲ ಸಿಐಡಿ ಅಧಿಕಾರಿಗಳು ಗ್ಯಾನೇಂದ್ರ ಅವರ ವಿಚಾರಣೆ ನಡೆಸಿದ್ದರು. ನಿನ್ನೆ ಮಧ್ಯಾಹ್ನ 12 ಗಂಟೆಯಿಂದ ಮತ್ತೆ ವಿಚಾರಣೆ ನಡೆಸಿದ್ದರು.
