ಗ್ವಾಲಿಯಾರ್: ಭಾರತೀಯ ವಾಯು ಸೇನೆಯ ತರಬೇತಿ ನಿರತ ಮಿಗ್ 21 ವಿಮಾನ ಮಧ್ಯಪ್ರದೇಶದ ಗ್ವಾಲಿಯಾರ್‌ನಲ್ಲಿ ಪತನಗೊಂಡಿದೆ.
ಪತನಗೊಳ್ಳುತ್ತಿದ್ದಂತೆ ಗ್ರೂಪ್ ಕ್ಯಾಪ್ಟನ್ ಮತ್ತು ಸ್ಕ್ವಾಡ್ರನ್ ಲೀಡರ್ ವಿಮಾನದಿಂದ ಹೊರಕ್ಕೆ ಜಿಗಿದು ಪ್ರಾಣವನ್ನು ಉಳಿಸಿಕೊಂಡಿದ್ದಾರೆ. ಬೆಳಗ್ಗೆ 10 ಗಂಟೆಯ ವೇಳೆ ವಿಮಾನ ಖಾಲಿ ಜಾಗದಲ್ಲಿ ಬಿದ್ದಿರುವುದಾಗಿ ವರದಿಯಾಗಿದೆ. ಈ ವರ್ಷದ ಮಾರ್ಚ್ 31 ರಂದು ರಾಜಸ್ಥಾನದ ಬಾರ್ಮರ್ ವಾಯುನೆಲೆಯಲ್ಲಿ ಮಿಗ್ ವಿಮಾನ ಪತನಗೊಂಡಿತ್ತು.
Advertisement
Madhya Pradesh: MiG 21 Trainer aircraft of the Indian Air Force crashed in Gwalior, today. Both the pilots, including a Group Captain and a squadron leader, managed to eject safely. pic.twitter.com/Gdmik5RhTN
— ANI (@ANI) September 25, 2019
Advertisement
ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಇದನ್ನೂ ಓದಿ: 44 ವರ್ಷ ಹಳೆಯ ಕಾರನ್ನು ಯಾರೂ ಬಳಸಲಾರರು – ಮಿಗ್ ಬಳಕೆ ಕುರಿತು ಧನೋವಾ ಮಾತು
Advertisement
ಸದ್ಯ ಭಾರತದಲ್ಲಿ ಈಗ 100ಕ್ಕೂ ಅಧಿಕ ಮಿಗ್ ವಿಮಾನಗಳಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯಗೊಂಡು ಪತನದ ಸೂಚನೆ ಸಿಕ್ಕಿದ ಕೂಡಲೇ ಹಲವು ಪೈಲಟ್ ಗಳು ಎಜೆಕ್ಟ್ ಆಗದೇ ವಿಮಾನವನ್ನು ಜನವಸತಿ ಇಲ್ಲದ ಕಡೆಗೆ ತಿರುಗಿಸಿ ಪ್ರಾಣಬಿಟ್ಟಿದ್ದಾರೆ.
Advertisement
ಹಾರುವ ಶವಪೆಟ್ಟಿಗೆ ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸಿದ್ದರು. 2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು. ಇದನ್ನೂ ಓದಿ: ಆರ್ 73 ಸೆಲೆಕ್ಟ್ ಮಾಡಿದ್ದೇನೆ : ಅಭಿನಂದನ್ ಕೊನೆಯ ರೇಡಿಯೋ ಸಂದೇಶ – ಡಾಗ್ ಫೈಟ್ ಹೇಗೆ ನಡೆಯಿತು?