ಜೈಪುರ: ರಾತ್ರಿ ತರಬೇತಿ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ವಾಯುಪಡೆಯ ಮಿಗ್-29 ಫೈಟರ್ ಜೆಟ್ (MiG-29 Fighter Jet) ರಾಜಸ್ಥಾನದಲ್ಲಿ ಪತನಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾರ್ಮರ್‌ನಲ್ಲಿ ದುರ್ಘಟನೆ ನಡೆದಿದ್ದು, ಪೈಲಟ್ (Pilot) ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಜೆಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ವಾಯುಪಡೆ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: Kolkata Horror | ಟ್ರೈನಿ ವೈದ್ಯೆ ʻಹತ್ಯಾʼಚಾರ ನಡೆದಿದ್ದ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅರೆಸ್ಟ್
Advertisement
ಬಾರ್ಮರ್ (Barmer) ಪ್ರದೇಶದಲ್ಲಿ ಎಂದಿನಂತೆ ರಾತ್ರಿ ತರಬೇತಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಐಎಎಫ್‌ನ ಮಿಗ್-29 ಜೆಟ್‌ನಲ್ಲಿ ನಿರ್ಣಾಯಕ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜೆಟ್ ಪತನದ ಅಂಚಿಗೆ ತಲುಪುತ್ತಿದ್ದಂತೆ ಪೈಲಟ್ ಹೊರಕ್ಕೆ ಹಾರಿದ್ದಾರೆ.
Advertisement
ಸದ್ಯ ಪೈಲಟ್ ಸುರಕ್ಷಿತವಾಗಿದ್ದು, ಯಾವುದೇ ಜೀವಹಾನಿ ಹಾಗೂ ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ. ಸದ್ಯ ಐಎಎಫ್ ಕೋರ್ಟ್ ವಿಚಾರಣೆಗೆ ಆದೇಶಿಸಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: Paralympics | ಮನೀಶಾ ಕಂಚಿನ ಮಿಂಚು – ಬ್ಯಾಡ್ಮಿಂಟನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ!