-ಲವ್ ಮಾಕ್ಟೇಲ್ ಜೋಡಿ ಮನೆಗೆ ‘ನಿಧಿ’ ಆಗಮನ
– ಹೆಣ್ಣು ಮಗು ಜನಿಸಿರೋದಕ್ಕೆ ನಾನೊಬ್ಬ ಅದೃಷ್ಟವಂತ ತಂದೆ ಎಂದ ಡಾರ್ಲಿಂಗ್ ಕೃಷ್ಣ
ಲವ್‌ಮಾಕ್ಟೇಲ್ (Love Mocktail) ಸಿನಿಮಾ ಖ್ಯಾತಿಯ ಮಿಲನಾ ನಾಗರಾಜ್ (Milana Nagaraj) ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ (Darling Krishna) ಅವರು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ.
ಮೊದಲ ಮಗುವನ್ನು ಪಡೆದುಕೊಂಡು ಡಾರ್ಲಿಂಗ್ ಕೃಷ್ಣ ಕುಟುಂಬ ಸಂಭ್ರಮದಲ್ಲಿದೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗಳು ಬಂದಿರುವುದು ಬಹಳ ಖುಷಿ ನೀಡಿದೆ. ತಾಯಿ ಮತ್ತು ಮಗಳು ಆರೋಗ್ಯವಾಗಿದ್ದಾರೆ.ಇದನ್ನೂ ಓದಿ: ನಾವು ಕೆಲಸ ಮಾಡುವ ಜಾಗದಲ್ಲಿ ಆತಂಕ ಇರಬಾರದು: ಕಾಸ್ಟಿಂಗ್ ಕೌಚ್ ಬಗ್ಗೆ ಹಿತಾ ಮಾತು
View this post on Instagram
ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯದ ಬಗ್ಗೆ ನನಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದಿರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ದುಪ್ಪಟ್ಟಾಗಿದೆ. ಇಂದು ಮಗಳು ಜನಿಸಿರೋದು ನನಗೆ ಹೆಮ್ಮೆಯಿದೆ. ನಾನೊಬ್ಬ ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಪೋಸ್ಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಝೈದ್ ಖಾನ್‌ಗೆ ಮಲೈಕಾ ವಸುಪಾಲ್ ಹೀರೋಯಿನ್