ಶ್ರೀನಗರ: ಕಾಶ್ಮೀರಿ ಪಂಡಿತರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಕಾಶ್ಮೀರಿ ಪಂಡಿತ್ ಸಮುದಾಯದ ರಾಹುಲ್ ಭಟ್ ಹತ್ಯೆಗೀಡಾದ ವ್ಯಕ್ತಿ. ಮೃತರು ಕಂದಾಯ ಇಲಾಖೆಯ ನೌಕರರಾಗಿದ್ದರು. ಕೇಂದ್ರ ಕಾಶ್ಮೀರದ ಚದೂರದಲ್ಲಿರುವ ತಹಸೀಲ್ದಾರ್ ಕಚೇರಿಯಲ್ಲಿಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿ ಸಾವನ್ನಪ್ಪಿದ್ದಾರೆ.
Advertisement
Advertisement
ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿ, ಬುದ್ಗಾಮ್‍ನ ತಹಸೀಲ್ದಾರ್ ಕಚೇರಿ ಚದೂರದಲ್ಲಿ ಅಲ್ಪಸಂಖ್ಯಾತ ಸಮುದಾಯದ ರಾಹುಲ್ ಭಟ್ ಎಂಬ ನೌಕರನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ
Advertisement
Advertisement
ಘಟನೆಯ ನಂತರ, ಭದ್ರತಾ ಪಡೆಗಳು ಘಟನೆ ನಡೆದ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಘಟನೆಯ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಶ್ವನಿ ಹಂಡಾ, ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್ ಹಿಂದೆ ʼತೇಜೋ ಮಹಾಲಯʼವಾಗಿತ್ತು, ಅಲ್ಲಿ ಹಿಂದೂ ವಿಗ್ರಹಗಳಿವೆ – ತನಿಖೆಗಾಗಿ ಕೋರ್ಟ್‌ಗೆ ಮನವಿ
#Terrorists fired upon one employee namely Shri Rahul Bhat from #minority community in Tehsildar office Chadoora, #Budgam. He has been shifted to hospital.@JmuKmrPolice
— Kashmir Zone Police (@KashmirPolice) May 12, 2022
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಉಗ್ರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದರು