ಇಡೀ ದೇಶ, ಸೇನೆ, ಸೈನಿಕರು ಮೋದಿ ಪಾದಗಳಿಗೆ ನಮಸ್ಕರಿಸುತ್ತಾರೆ: ಡಿಸಿಎಂ ವಿವಾದಾತ್ಮಕ ಹೇಳಿಕೆ

Public TV
2 Min Read
Jagdish Devda 2

ಭೋಪಾಲ್‌: ಪಹಲ್ಗಾಮ್‌ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪಾದಗಳಿಗೆ ಇಡೀ ದೇಶ, ಸೇನೆ ಮತ್ತು ಸೈನಿಕರು ನಮಸ್ಕರಿಸುತ್ತಾರೆ ಎಂದು ಮಧ್ಯಪ್ರದೇಶದ ಡಿಸಿಎಂ ಜಗದೀಶ್ ದೇವ್ಡಾ (Jagdish Devda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Pahalgam

ಇತ್ತೀಚೆಗಷ್ಟೇ ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಅವರು ಕರ್ನಲ್‌ ಸೋಫಿಯಾ ಖುರೇಷಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಸುಪ್ರೀಂ ಕೋರ್ಟ್‌ (Supreme Court) ಸಹ ಅವರಿಗೆ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ಬಿಜೆಪಿಯ ಡಿಸಿಎಂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಬಲ್ಪುರದಲ್ಲಿ ನಾಗರಿಕ ರಕ್ಷಣಾ ಸ್ವೈಂಸೇವಕರ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇಡೀ ದೇಶ, ಸೇನೆ, ಸೈನಿಕರು ಮೋದಿಯವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಟರ್ಕಿಗೆ ಬೆಂಗಳೂರು ಶಾಕ್‌ – ಸೆಲೆಬಿ ಏವಿಯೇಷನ್‌ ಏರ್‌ಪೋರ್ಟ್‌ ಸೇವೆ ಸ್ಥಗಿತ

Operation Sindoor

ಅಂದು ಪಹಲ್ಗಾಮ್‌ಗೆ (Pahalgam) ಹೋದ ಪ್ರವಾಸಿಗರಿಗೆ ಧರ್ಮ ಕೇಳಿ, ಮಹಿಳೆಯರನ್ನ ಪಕ್ಕಕ್ಕೆ ನಿಲ್ಲಿಸಿ, ಮಕ್ಕಳ ಮುಂದೆಯೇ ಗುಂಡು ಹಾರಿಸಿ ಕೊಲ್ಲಲಾಯಿತು. ಆ ದಿನದಿಂದಲೂ ದೇಶದ ಜನರ ಮನಸ್ಸಿನಲ್ಲಿ ತುಂಬಾ ಕ್ರೋಧ ಇತ್ತು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವವರೆಗೂ ನೆಮ್ಮದಿಯಿಂದ ಉಸಿರಾಡಲು ಸಾಧ್ಯವಿಲ್ಲ ಎಂಬ ಭಾವನೆ ಜನರಲ್ಲಿತ್ತು. ಸದ್ಯ ಪಹಲ್ಗಾಮ್‌ ದಾಳಿಗೆ ಪ್ರಧಾನಿ ಮೋದಿ ಅವರು ಕೊಟ್ಟ ಉತ್ತರವನ್ನ ಎಷ್ಟು ಹೊಗಳಿದರೂ ಸಾಲದು. ಯಶಸ್ವಿ ಪ್ರಧಾನಿಗಳಿಗೆ ಧನ್ಯವಾದ ಹೇಳಲು ಇಡೀ ದೇಶ, ದೇಶದ ಸೈನ್ಯ ಹಾಗೂ ಸೈನಿಕರು ಅವರ ಪಾದಗಳಿಗೆ ನಮಸ್ಕರಿಸುತ್ತಾರೆ ಎಂದು ಹೇಳುತ್ತಾ ಪೇಚಿಗೆ ಸಿಲುಕಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ಬೆದರಿ ರಾವಲ್ಪಿಂಡಿಯಿಂದ ಪಾಕ್‌ ಸೇನಾ ಪ್ರಧಾನ ಕಚೇರಿ ಇಸ್ಲಾಮಾಬಾದ್‌ಗೆ ಶಿಫ್ಟ್‌!

Tourist Killed 6 Others Injured In Terrorist Attack In Jammu and Kashmir Pahalgam

ರಾಜೀನಾಮೆಗೆ ಡಿಸಿಎಂ ಆಗ್ರಹ:
ಇನ್ನೂ ಜಗದೀಶ್‌ ದೇವ್ಡಾ ಹೇಳಿಯನ್ನ ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ, ಇದು ಸೇನೆಗೆ ಮಾಡಿದ ಅಪಮಾನ ಎಂದು ಕಿಡಿ ಕಾರಿದೆ. ದೇವ್ಡಾ ಅವರ ಈ ಹೇಳಿಕೆ ತುಂಬಾ ಕೀಳುಮಟ್ಟದ್ದು. ಇದು ಸೇನೆಯ ಶೌರ್ಯ ಮತ್ತು ಸಾಹಸಕ್ಕೆ ಮಾಡಿದ ಅವಮಾನ. ಇಂದು ಇಡೀ ದೇಶವೇ ಸೇನೆಗೆ ತಲೆಬಾಗುತ್ತಿರುವಾಗ, ಬಿಜೆಪಿ ನಾಯಕರು ನಮ್ಮ ಕೆಚ್ಚೆದೆಯ ಸೇನೆಯ ಬಗ್ಗೆ ತಮ್ಮ ಕಳಪೆ ಮನಸ್ಥಿತಿಯನ್ನು ತೋರಿಸಿದ್ದಾರೆ. ಇದಕ್ಕೆ ಅವರು ಕ್ಷಮೆಯಾಚಿಸಬೇಕು. ಬಿಜೆಪಿ ಅವರನ್ನು ಡಿಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ 2 ಎನ್‌ಕೌಂಟರ್‌ – ಭಾರತೀಯ ಸೇನೆ 6 ಉಗ್ರರನ್ನು ಹೊಡೆದುರುಳಿಸಿದ್ದು ಹೇಗೆ?

Share This Article