ಬೆಂಗಳೂರು: ರಾಜ್ಯ ಸರ್ಕಾರ ಉಚಿತ ಗ್ಯಾರಂಟಿಗಳನ್ನ ಘೋಷಿಸಿ ಅದರಲ್ಲಿ ಕೆಲವೊಂದನ್ನ ನೀಡುತ್ತಲೂ ಇದೆ. ಆದ್ರೆ ಯಾವಾಗ ಗ್ಯಾರಂಟಿ ಅನುಷ್ಠಾನಕ್ಕೆ ಬಂತೋ ಆಗಿನಿಂದ ಜನರ ಮೇಲೆ ದರ ಏರಿಕೆಯ ಬರೆ ಹಾಕುತ್ತಲೇ ಇದೆ. ಇದೀಗ ಹಾಲಿನ ದರ ಹೆಚ್ಚಳ (Milk Price Hike) ಮಾಡಲು ಸರ್ಕಾರ ಮುಂದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಸಭೆ ಕರೆದಿದ್ದಾರೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಸಂಬಂಧಪಟ್ಟ ಸಚಿವರೊಂದಿಗೆ ಸಭೆ ನಡೆಸಲಿದ್ದು, ಹಾಲಿನ ದರ ಏರಿಕೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಇದನ್ನೂ ಓದಿ: ತುಮಕೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಶೀತಲ ಸಮರ; ಡಾ.ರಂಗನಾಥ್-ರಾಜಣ್ಣ ಕುಟುಂಬ ನಡುವೆ ವಾರ್
ಮೇವು, ಆಹಾರ, ಕೂಲಿ ಸೇರಿ ಇತರೇ ಖರ್ಚುಗಳು ಹೆಚ್ಚಾಗಿರುವುದರಿಂದ ಪ್ರತಿ ಲೀ. ಹಾಲಿಗೆ 5 ರೂ. ನಂತೆ ದರ ಹೆಚ್ಚಳ ಮಾಡಲು ವಿವಿಧ ಹಾಲು ಒಕ್ಕೂಟಗಳು ಪಶುಸಂಗೋಪನೆ ಸಚಿವ ವೆಂಕಟೇಶ್ ಅವರಿಗೆ ಒತ್ತಾಯಿಸಿದ್ದವು. ಈ ಹಿನ್ನೆಲೆ ದರ ಹೆಚ್ಚಳ ಪ್ರಸ್ತಾಪವಾಗಿದ್ದು, ಸರ್ಕಾರದ ಅನುಮತಿ ಬಾಕಿಯಿದೆ. ಇದನ್ನೂ ಓದಿ: IPL 2025: ಗಾಯಕ್ವಾಡ್, ರಚಿನ್ ಫಿಫ್ಟಿ ಆಟ – ಮುಂಬೈ ವಿರುದ್ಧ ಚೆನ್ನೈಗೆ 4 ವಿಕೆಟ್‌ಗಳ ಜಯ